ಸಿಂಧಿ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡದ ನಾಲ್ಕನೇ ವರ್ಷದ ವಾರ್ಷಿಕೋತ್ಸವ
ಯಲಹಂಕ ಸುದ್ದಿ ದಿನಾಂಕ 5/4/2026ರಂದು ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಕಟ್ಟಡದ ನಾಲ್ಕನೇ ವಾರ್ಷಿಕೋತ್ಸವ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ
ಸಿಂಧಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಎಫ್ ಮಾಧ್ವಾನಿಯವರು ಮಾತನಾಡಿ ಜ್ಞಾನವನ್ನು ದಾನ ಮಾಡುವ ಉದ್ದೇಶದಿಂದ ನಗರದ ಕೆ.ಕೆ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯನ್ನು ಆರಂಭಿಸಿ ನಂತರ ಹೆಬ್ಬಾಳದ ಕೆಂಪಾಪುರದಲ್ಲಿ ಪ್ರೌಢಶಾಲೆಯ ಮತ್ತೊಂದು ಶಾಖೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಸ್ನಾತಕೋತರ ಕೇಂದ್ರ, ಸಿಂಧಿ ಸೇವಾ ಶಾಲೆ ಹೀಗೆ ವಿಸ್ತರಣೆಗೊಂಡಿತು.ಕೆಂಪಾಪುರದಲ್ಲಿ ಆರಂಭವಾದ ಸಿಂಧಿ ಪದವಿಪೂರ್ವ ಕಾಲೇಜು ಥಣಿಸಂದ್ರ ಮುಖ್ಯ ರಸ್ತೆಯ ಚೊಕ್ಕನಹಳ್ಳಿಯಲ್ಲಿ ನೂತನ ಕಟ್ಟಡದಲ್ಲಿ ಸ್ಥಳಾಂತರಗೊಂಡು ಇದೀಗ ಸುಸಜ್ಜಿತ ವ್ಯವಸ್ಥೆಯೊಂದಿಗೆ ಕಟ್ಟಡವು ಅತ್ಯಂತ ಯಶಸ್ವಿಯಾಗಿ ನಾಲ್ಕನೇ ವಸಂತಕ್ಕೆ ಕಾಲಿರಿಸಿದೆ. ಸಾಕಷ್ಟು ಅನುಭವ ಹೊಂದಿರುವ ಉಪನ್ಯಾಸಕರಿಂದ ಇಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ನಗರದ ಪ್ರತಿಷ್ಠಿತ ಪದವಿಪೂರ್ವ ಕಾಲೇಜುಗಳಲ್ಲಿ ಎದ್ದು ಕಾಣುತ್ತಿದೆ ಎಂದು ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಸಿಂಧಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಶೋಕ್ ಪಿ ನಾರಂಗ್ ಅವರು ಸಿಂಧಿ ವಿದ್ಯಾ ಸಂಸ್ಥೆಯ ಎಲ್ಲ ಪದಾಧಿಕಾರಿಗಳು, ಅತಿಥಿಗಳು ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ನಂದ ಎನ್ ಅವರು ಪ್ರಾಸ್ತಾವಿಕ ಭಾಷಣದಲ್ಲಿ ಸಿಂಧಿ ಪದವಿಪೂರ್ವ ಕಾಲೇಜು ನಡೆದು ಬಂದ ದಾರಿಯನ್ನು ವಿವರಿಸುತ್ತಾ ವಿಡಿಯೋದ ಮೂಲಕ ಕಾಲೇಜಿನ ಶೈಕ್ಷಣಿಕ, ಸಾಂಸ್ಕೃತಿಕ ಸಾಧನೆಗಳನ್ನು ತೆರೆದಿಟ್ಟರು.
ಸಮಾರಂಭದ ನಡುವೆ ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಲಾಯಿತು.
ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀಮತಿ ಕಾಂಚನ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಿಂಧಿ ಸೇವಾ ಸಮಿತಿ ಹಾಗೂ ಸಿಂಧಿ ವಿದ್ಯಾ ಸಂಸ್ಥೆಗಳ ಎಲ್ಲಾ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಮಿಲನ್ ಗುಪ್ತ ಅವರು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ವಿಜೃಂಭಣೆಯಿಂದ ನಡೆಯಿತು.

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ

R Hanumanthau kogilu layout Yelahanka

9845085793.     7349337989. 9035282296

Leave a Reply

Your email address will not be published. Required fields are marked *