


ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ 24.04.2026, ಶುಕ್ರವಾರದಂದು ಕತ್ರಿಗುಪ್ಪೆಯ ಶ್ರೀ ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10:30 ಗಂಟೆಗೆ “ಕ್ರೀಡಾ-ಸಾಂಸ್ಕೃತಿಕ ಉತ್ಸವ–2026” ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಿತು.
ಈ ಕಾರ್ಯಕ್ರಮದಲ್ಲಿ ಕ್ರೀಡಾ-ಸಾಂಸ್ಕೃತಿಕ ಉತ್ಸವ–2026ರಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗೂ ಪಾರಿತೋಷಕಗಳನ್ನು, ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ನಿಧನರಾದ ನೌಕರರ ಅವಲಂಬಿತರಿಗೆ ವಿಮಾ ಪರಿಹಾರ ಮೊತ್ತವನ್ನು ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮಕ್ಕಳಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳಿಗೆ ವಿದ್ಯಾ ಸಹಾಯ ನಿಧಿ ಮೊತ್ತವನ್ನು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ವಿತರಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿ.ಎಸ್.ಆರಾಧ್ಯ ಅವರು ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ನಿಕೇತ್ ರಾಜ್.ಎಂ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ, ಬೆಂ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವಕುಮಾರ್.ಕೆ.ಬಿ, ಭಾ.ಆ.ಸೇ., ನಿರ್ದೇಶಕರು (ಭದ್ರತೆ & ಜಾಗೃತಿ) ರವರಾದ *ಶ್ರೀ ಅಬ್ದುಲ್ ಅಹದ್, ಭಾ.ಪೋ.ಸೇ, ಸೇರಿದಂತೆ ಸಂಸ್ಥೆಯ ಎಲ್ಲಾ ಹಿರಿಯ ಅಧಿಕಾರಿಗಳು, ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಿಬ್ಬಂದಿ ವರ್ಗದವರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.
ಸಂಸ್ಥೆಯು ನೌಕರರ ಕಲ್ಯಾಣ ಮತ್ತು ಅವರ ಕುಟುಂಬಗಳ ಅಭ್ಯುದಯಕ್ಕೆ ಸದಾ ಬದ್ಧವಾಗಿದ್ದು, ಇಂತಹ ಕಾರ್ಯಕ್ರಮಗಳು ನೌಕರರಲ್ಲಿ ಸೌಹಾರ್ದತೆ ಮತ್ತು ಉತ್ಸಾಹವನ್ನು ಹೆಚ್ಚಿಸುತ್ತವೆ ಎಂದು ಸಚಿವರು ತಮ್ಮ ಭಾಷಣದಲ್ಲಿ ತಿಳಿಸಿದರು.
ಈ ಕಾರ್ಯಕ್ರಮವನ್ನು ವ್ಯಾಪಕವಾಗಿ ವರದಿ ಮಾಡಿ ಸಂಸ್ಥೆಯ ಕಲ್ಯಾಣ ಕಾರ್ಯಗಳನ್ನು ಸಾರ್ವಜನಿಕರಿಗೆ ತಲುಪಿಸಲು ಸಹಕರಿಸಿದ ಎಲ್ಲಾ ಪತ್ರಕರ್ತರಿಗೆ ಮತ್ತು ಮಾಧ್ಯಮ ಮಿತ್ರರಿಗೆ ಹೃತ್ಪೂರ್ವಕ ಅಭಿನಂದನೆಗಳು.
ವಂದನೆಗಳೊಂದಿಗೆ,
ಸುನೀತಾ.ಜೆ
ಸಾರ್ವಜನಿಕ ಸಂಪರ್ಕಾಧಿಕಾರಿಗಳು,
ಬೆಂ.ಮ.ಸಾ.ಸಂಸ್ಥೆ
ಮೊಬೈಲ್: +91-7760999000
