











ಅಖಿಲ ಭಾರತ ವೀರಶೈವ ಮಹಾಸಭಾದಿಂದ 1 ಸಾವಿರ ಮಂದಿ ವಾಸ ಸಾಮರ್ಥ್ಯದ ವಿದ್ಯಾರ್ಥಿ ನಿಲಯ ನಿರ್ಮಾಣ :
ಸಚಿವ ಈಶ್ವರ್ ಖಂಡ್ರೆ, ಶಂಕರ್ ಬಿದರಿ ಅವರಿಂದ ವಿದ್ಯಾರ್ಥಿ ನಿಲಯದ ಸ್ಥಳ ಪರಿಶೀಲನೆ :
ಬ್ಯಾಟರಾಯನಪುರ : ಕ್ಷೇತ್ರದ ಬೆಟ್ಟಹಲಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತರಹುಣಸೆ ಗ್ರಾಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ 1 ಸಾವಿರ ಮಂದಿ ವಿದ್ಯಾರ್ಥಿಗಳ ವಾಸ ಸಾಮರ್ಥ್ಯದ ಬೃಹತ್ ವಿದ್ಯಾರ್ಥಿ ನಿಲಯ ನಿರ್ಮಾಣ ಸ್ಥಳಕ್ಕೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಖಾತೆಯ ಸಚಿವರಾದ ಈಶ್ವರ ಖಂಡ್ರೆ ಹಾಗೂ ಮಹಾಸಭಾದ ರಾಜ್ಯಾಧ್ಯಕ್ಷರು, ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರು ಶನಿವಾರ ಮುಂಜಾನೆ ಬೇಟಿ ನೀಡಿ ಪರಿಶೀಲಿಸಿದರು.
ಇದೇ ವೇಳೆ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಅವರು ಸುತ್ತಮುತ್ತಲಿನ ಪ್ರದೇಶದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಬೆಟ್ಟಹಲಸೂರು ಗ್ರಾಮದ ಮುಖಂಡರಾದ ಹಿರಿಯಾಳ್ ಚಿತ್ರಶೇಖರ್, ಬಸವರಾಜ್, ನಂದೀಶ್, ನಟರಾಜ್, ಜೀರಿಗೆ ಬಾಬು, ವೆಂಕಟೇಶ್, ರಾಜಾನುಕುಂಟೆ ಮುಖಂಡರಾದ ರಾಜೇಂದ್ರ ಪ್ರಸಾದ್, ಮಲ್ಲಿಕಾರ್ಜುನ್, ಮಹೇಶ್ ಸೇರಿದಂತೆ ಇನ್ನಿತರರಿದ್ದರು.
ಇದೇ ವೇಳೆ ಸಚಿವ ಈಶ್ವರ್ ಖಂಡ್ರೆ ಮತ್ತು ಶಂಕರ್ ಬಿದರಿ ಅವರನ್ನು ಮುಖಂಡರಾದ ಚಿತ್ರಶೇಖರ್ ಅವರ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
