











ನರೇಂದ್ರ ಮೋದಿಯವರ ಹೆಸರಲ್ಲಿ
ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ, ಸಿಹಿ ಹಂಚಿ ಸಂಭ್ರಮಾಚರಣೆ :
ಯಲಹಂಕ : 12 ವರ್ಷಗಳ ಸುದೀರ್ಘ ಕಾಲದವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುವ ಮೂಲಕ ನರೇಂದ್ರ ಮೋದಿ ಯವರು ಭಾರತದ ಇತಿಹಾಸದಲ್ಲಿ ಅತ್ಯಧಿಕ ದಿನಗಳ ಕಾಲ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಪ್ರಥಮ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಮಾರ್ಗದರ್ಶನದ ಮೇರೆಗೆ ಯಲಹಂಕ ನಗರ ಮಂಡಲ ವ್ಯಾಪ್ತಿಯ ಚೌಡೇಶ್ವರಿ ವಾರ್ಡ್-3ರ ಬಿಜೆಪಿ ಮುಖಂಡರು, ಕಾರ್ಯಕರ್ತರು ಚೌಡೇಶ್ವರಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿ.ವಿ.ರಾಮಮೂರ್ತಿ ಅವರ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಅವರ ಹೆಸರಿನಲ್ಲಿ ಚೌಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ನರೇಂದ್ರ ಮೋದಿಯವರ ಪರ ವಿವಿಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು ನರೇಂದ್ರ ಮೋದಿಯವರು ಇನ್ನೂ ಹಲವು ಕಾಲ ದೇಶದ ಪ್ರಧಾನಿಯಾಗಿ ಅಧಿಕಾರ ನಡೆಸುವ ಮೂಲಕ ದೇಶದ ಹಿರಿಮೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಜ್ವಲಿಸುವಂತೆ ಮಾಡಲೆಂದು ಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೋರಿಕೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಎ.ಎಸ್.ರಾಜ, ಜಿ.ಈಶ್ವರಪ್ಪ, ಬಿ.ಕೇಶವ, ಬಿ.ಹರಿನಾಥ್, ನಾರಾಯಣ ಪೈ, ದಾಮೋದರ್, ವೈ.ವಿ.ಮುನಿರಾಜು, ಗೋಪಾಲಕೃಷ್ಣ, ಭರತ್ ಕುಮಾರ್, ಧನು ಸೇರಿದಂತೆ ಹಲವು ಬಿಜೆಪಿ ಮುಖಂಡರಿದ್ದರು.
