












ಯಲಹಂಕ : ವಿಶ್ವವಾಣಿ ಫೌಂಡೇಶನ್, ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘ ಮತ್ತು ಶಂಕರ ಕಣ್ಣಿನ ಆಸ್ಪತ್ರೆ ಇವರ ಸಹಯೋಗದಲ್ಲಿ ಯಲಹಂಕ ಕ್ಷೇತ್ರದ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದ ಸರ್ಕಾರಿ ಶಾಲಾವರಣದಲ್ಲಿ ಆಯೋಜಿಸಿದ್ದ ಬೃಹತ್ ನೇತ್ರ ತಪಾಸಣೆ ಮತ್ತು ಚಿಕಿತ್ಸೆ ಶಿಬಿರವನ್ನು ಶಾಸಕ ಎಸ್ ಆರ್ ವಿಶ್ವನಾಥ್ ಉದ್ಘಾಟಿಸಿದರು.
ಶಿಬಿರದಲ್ಲಿ ನೂರಾರು ಮಕ್ಕಳು, ಯುವಕ, ಯುವತಿಯರು, ವೃದ್ಧರು ಪಾಲ್ಗೊಂಡು ಶಿಬಿರವನ್ನು ಯಶಸ್ವಿಗೊಳಿಸಿ ದರು. ನೇತ್ರ ದೋಷ ಇರುವ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಶಿಬಿರದಲ್ಲಿ ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಡಾ.ವಾಣಿಶ್ರೀವಿಶ್ವನಾಥ್, ಸಿಂಗನಾಯಕನಹಳ್ಳಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ರೈತರ ಸೇವಾ ಸಹಕಾರ ಸಂಘದ ನಿರ್ದೇಶಕರಾದ ತಿಮ್ಮರಾಯಿ ಗೌಡ, ಶಿವಕುಮಾರ್, ಪುಟ್ಟರಾಜು, ಚಂದ್ರು, ರಾಮಚಂದ್ರ ರೆಡ್ಡಿ, ಮುನಿಯಪ್ಪ, ಗ್ರಾ.ಪಂ.ಮಾಜಿ ಸದಸ್ಯೆ ಪದ್ಮಶ್ರೀ ನಾಗರಾಜರೆಡ್ಡಿ, ಸಿಇಒ ಶಶಿಧರ್ ಸೇರಿದಂತೆ ಶಂಕರ ಕಣ್ಣಿನ ಆಸ್ಪತ್ರೆಯ ನುರಿತ ವೈದ್ಯರು ಹಾಗೂ ಸಿಬ್ಬಂದಿಗಳಿದ್ದರು.
