ಕೋಗಿಲಿನ ಆಕ್ಸ್ಫರ್ಡ್ ಆಂಗ್ಲ ಶಾಲೆಯಲ್ಲಿ ವಿದ್ಯಾರ್ಥಿ ನಾಯಕತ್ವ ಪದಗ್ರಹಣ ಸಮಾರಂಭ

ವಿದ್ಯಾರ್ಥಿ ನಾಯಕತ್ವ ಪದಗ್ರಹಣ
ಸಮಾರಂಭ ಯಶಸ್ವಿಯಾಗಿ ನೆರವೇರಿತು
ಆಕ್ಸ್ಫರ್ಡ್ ಆಂಗ್ಲ ಶಾಲೆ ಹಾಗೂ ಸಂಯುಕ್ತ ಪಿಯು ಕಾಲೇಜು, ಕೋಗಿಲು ರಸ್ತೆ, ಯಲಹಂಕದಲ್ಲಿ ಇಂದು ಬೆಳಿಗ್ಗೆ ವಿದ್ಯಾರ್ಥಿ ನಾಯಕತ್ವ ಪದಗ್ರಹಣ ಸಮಾರಂಭವು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹವಾಲ್ದಾರ್ ವೀರಪ್ಪ ಮಲ್ಲಪ್ಪ ಗುಮ್ಕರ್ ಹಾಗೂ ಶಂಕರಪ್ಪ ಭಾಗವಹಿಸಿ ವಿದ್ಯಾರ್ಥಿಗಳಿಗೆ ನಾಯಕತ್ವ, ಶಿಸ್ತು ಮತ್ತು ದೇಶಭಕ್ತಿಯ ಮಹತ್ವವನ್ನು ತಿಳಿಸಿದರು.
ಶಾಲೆಯ ಅಧ್ಯಕ್ಷರಾದ ಶ್ರೀ ಪ್ರಕಾಶ್, ಪ್ರಾಂಶುಪಾಲರಾದ ಶ್ರೀಮತಿ ಪ್ರಮಿಳಾ ರಾಜೇಶ್ ಹಾಗೂ ಪಿಯು ವಿಭಾಗದ ಇನ್‌ಚಾರ್ಜ್ ಶ್ರೀಮತಿ ಶೋಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿ ಪರಿಷತ್‌ನ ನೂತನ ಪದಾಧಿಕಾರಿಗಳಿಗೆ ಬ್ಯಾಡ್ಜ್ ಮತ್ತು ಸ್ಯಾಶ್‌ಗಳನ್ನು ವಿತರಿಸಿ, ಪ್ರಮಾಣ ವಚನ ಬೋಧಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಿದರು.

Leave a Reply

Your email address will not be published. Required fields are marked *