2ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ.
ಟ್ರೇಡಿಷನಲ್ ಶೋಟೋಕನ್ ಕರಾಟೆ ಅಕಾಡೆಮಿ ಕರ್ನಾಟಕ ಮತ್ತು WTSKF ಇವರ ಸಂಯುಕ್ತ ಆಶ್ರಯದಲ್ಲಿ ಎರಡನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯನ್ನು ಆಗಸ್ಟ್ 26 ಮತ್ತು 27 ರಂದು ಬಳ್ಳಾರಿ ನಗರದ ವಾಲ್ಮೀಕಿ ಭವನದಲ್ಲಿ ನಡೆಯಲಿದ್ದು ಸದರಿ ಪಂದ್ಯಾವಳಿಗೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ 800ಕ್ಕೂ ಹೆಚ್ಚು ಕರಾಟೆಪಟುಗಳು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಭಾಗವಹಿಸಲಿದ್ದು ಈ ಪಂದ್ಯಾವಳಿಯನ್ನು ಸನ್ಮಾನ್ಯ ಶ್ರೀ ಬಿ ನಾಗೇಂದ್ರ ಸರ್ ಸಚಿವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಇವರು ಉದ್ಘಾಟಿಸಲಿದ್ದಾರೆ
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಬಳ್ಳಾರಿ ನಗರ ಶಾಸಕರಾದ ನಾರಾ ಭರತ್ ರೆಡ್ಡಿ ಹಾಗೂ ಮಹಾನಗರ ಪಾಲಿಕೆ ಮಹಾಪೌರರಾದ ಡಿ ತ್ರಿವೇಣಿ ರವರು ಇನ್ನು ಅನೇಕ ಗಣ್ಯರು ಮಾನ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು. ಅಕಾಡೆಮಿಯ ಹಿರಿಯ ತರಬೇತುದಾರರು ಆಯೋಜಕರಾದ ಕಟ್ಟೆ ಸ್ವಾಮಿ ತಿಳಿಸಿದ್ದಾರೆ.