ಸೆ.2 ರಿಂದ 4 ರವರೆಗೆ ಉಪಲೋಕಾಯುಕ್ತ
ಕೆ.ಎನ್.ಘಣೀಂದ್ರ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ, ಅಗಸ್ಟ್ 25 (ಕರ್ನಾಟಕ ವಾರ್ತೆ)- ಗೌರವಾನ್ವಿತ ನ್ಯಾಯಮೂರ್ತಿ ಉಪಲೋಕಾಯುಕ್ತ ಕೆ.ಎನ್.ಘಣೀಂದ್ರ ಅವರು ಸೆಪ್ಟೆಂಬರ್ 2 ರಿಂದ 4 ರವರೆಗೆ ಬೀದರ ಜಿಲ್ಲಾ ಪ್ರವಾಸ ಕೈಗೊಂಡಿರುತ್ತಾರೆ.
ಅವರು ಸೆ.2 ರಿಂದ 4 ರವರೆಗೆ ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಬೀದರನ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ, ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸದಲ್ಲಿ ವ್ಯರ್ಥ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಉಪಲೋಕಾಯುಕ್ತರು ತನಿಖೆ, ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರ ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸಿ ನ್ಯಾಯ ಒದಗಿಸಿಕೊಡಲಿದ್ದಾರೆ.
ಪ್ರಯುಕ್ತ ಜಿಲ್ಲೆಯ ಸಾರ್ವಜನಿಕರು ಕಂದು ಕೊರತೆಗಳ ಅಹವಾಲುಗಳನ್ನು ಸಲ್ಲಿಸಲು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಎ.ಆರ್.ಕರ್ನೂಲ್, ಪೆÇಲೀಸ್ ಅಧೀಕ್ಷಕರು ಲೋಕಾಯುಕ್ತ ಕಲಬುರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.