ಜಿಲ್ಲಾ ಪಂಚಾಯತಿ ಬೆಂಗಳೂರು ನಗರ ವ್ಯಾಪ್ತಿಯ ಬೆಂಗಳೂರು ಉತ್ತರ ತಾಲ್ಲೂಕಿನ ಅಡಕಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಪರಿಶೀಲನಾ ಮತದಾರರ ಪಟ್ಟಿ (SIR) ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಯತೀಶ್ ಆರ್., ಐಎಎಸ್ ರವರು, ಮಾನ್ಯ ಉಪ ಕಾರ್ಯದರ್ಶಿ ಡಾ. ಎನ್. ನೋಮೆಶ್ ಕುಮಾರ್ ರವರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಜೋಸೆಫ್ ಎ. ರವರುಗಳು ಪ್ರಜಾಪ್ರಭುತ್ವ ಪ್ರತಿಜ್ಞೆ ಬೋಧಿಸುವ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಯತೀಶ್ ಆರ್., ಐಎಎಸ್ ರವರು, ವಿಶೇಷ ತೀವ್ರ ಪರಿಶೀಲನಾ ಮತದಾರರ ಪಟ್ಟಿ (SIR) ಅಭಿಯಾನದ ಮಹತ್ವವನ್ನು ವಿವರಿಸಿದರು. ಮತದಾರರ ಪಟ್ಟಿಯನ್ನು ನಿಖರ ಹಾಗೂ ಸಮರ್ಪಕವಾಗಿಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ತಮ್ಮ ಮಾಹಿತಿಯನ್ನು ದೃಢೀಕರಿಸಬೇಕು ಎಂದು ತಿಳಿಸಿದರು. ಅಲ್ಲದೆ, ಅರ್ಜಿಗಳನ್ನು ಆನ್‌ಲೈನ್ ಮೂಲಕವೂ ಸಲ್ಲಿಸಲು ಅವಕಾಶವಿದ್ದು, ಈ ಸೌಲಭ್ಯವನ್ನು ಸಾರ್ವಜನಿಕರು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಂತೆ ಕರೆ ನೀಡಿದರು.

ಅರ್ಹ ಮತದಾರರು ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳಾದ (BLO) ಗಳೊಂದಿಗೆ ಸಹಕರಿಸಿ ಅಗತ್ಯ ಮಾಹಿತಿಯನ್ನು ನೀಡಬೇಕು. ವಿಶೇಷವಾಗಿ 18 ವರ್ಷ ಪೂರ್ಣಗೊಂಡಿರುವ ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಹೊಸ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಅಮೂಲ್ಯವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಜಾಗೃತಿ ರ್ಯಾಲಿಯ ಮೂಲಕ ಸಾರ್ವಜನಿಕರಿಗೆ ತಲುಪಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ, ಬೂತ್ ಮಟ್ಟದ ಅಧಿಕಾರಿಗಳು (BLO), ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ, ಮತದಾರರ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸಿದರು.

ಬೆಂಗಳೂರು ಉತ್ತರ ತಾಲ್ಲೂಕಿನಲ್ಲಿ SIR ಜಾಗೃತಿ ಬೈಕ್ ರ್ಯಾಲಿಗೆ ಚಾಲನೆ – ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಸಾರ್ವಜನಿಕರಿಗೆ ಕರೆ

Leave a Reply

Your email address will not be published. Required fields are marked *