ಶಿಡ್ಲಘಟ್ಟ: ಜಿಲ್ಲೆ ಹಾಗೂ ತಾಲ್ಲೂಕಿನಾದ್ಯಂತ ಏಕಬಳಕೆ ಪ್ಲಾಸ್ಟಿಕ್‌ಗಳನ್ನು ನಿಷೇಧಿಸುವುದು ಇದರ ಮೊದಲ ಹೆಜ್ಜೆಯಾಗಿದೆ. ಇದರೊಂದಿಗೆ ಸಮರ್ಪಕ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವುದು ಬಹಳ ಮುಖ್ಯ. ಹಸಿ ತ್ಯಾಜ್ಯದೊಂದಿಗೆ ಒಣ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯವನ್ನು ಎಸೆಯದೇ ಸಮರ್ಪಕವಾಗಿ ವಿಂಗಡಿಸುವುದು ಮುಖ್ಯ ಎಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು ಮನವರಿಕೆ ಮಾಡಿದರು.

ತಾಲ್ಲೂಕಿನ ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಂಗಡಿಗಳ ಮಾಲೀಕರಿಗೆ ಹಾಗೂ ಮಾರುಕಟ್ಟೆಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಅರಿವು ಮಾಡಿಸಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಮನವರಿಕೆಯನ್ನು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಗ್ರಾಮಸ್ಥರಿಗೆ ಅರಿವು ಮೂಡಿಸಿದರು.

ಅದೇ ರೀತಿಯಾಗಿ ಬಹಳಷ್ಟು ಪ್ಲಾಸ್ಟಿಕ್ ತ್ಯಾಜ್ಯವು ಕೊಳೆಯುವುದಿಲ್ಲ. ಬದಲಾಗಿ ಅವು ಮೈಕ್ರೋಪ್ಲಾಸ್ಟಿಕ್ ಎಂದು ಕರೆಯಲ್ಪಡುವ ಅತಿ ಸಣ್ಣ ಚೂರುಗಳಾಗಿ ಉಳಿಯುತ್ತವೆ. ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಚೀಲಗಳು, ವಸ್ತುಗಳು sಸಾವಿರಾರು ವರ್ಷಗಳಾದರೂ ಭೂಮಿಯಲ್ಲಿ ಕೊಳೆಯದೇ ಉಳಿದುಬಿಡುತ್ತವೆ. ಈ ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಹೆಚ್ಚಿನವೆಂದರೆ ನಾವು ದಿನನಿತ್ಯ ಬಳಸುವ ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲಗಳು, ಆಹಾರದ ಪ್ಯಾಕೇಜುಗಳು, ಸ್ಟ್ರಾಗಳು, ಮುಂತಾದ ವಸ್ತುಗಳು. ಇಂತಹಾ ಪ್ಲಾಸ್ಟಿಕ್ ತ್ಯಾಜ್ಯ ಹಲವಾರು ರೀತಿಯ ಸಮಸ್ಯೆಗಳನ್ನು ತಂದೊಡ್ಡುತ್ತವೆ. ನೀರು ಹರಿಯುವ ದಾರಿಯನ್ನು ಮುಚ್ಚಿ ಅದರಿಂದ ನೈಸರ್ಗಿಕ ವಿಕೋಪಗಳಿಗೆ ಕಾರಣವಾಗಬಹುದು. ನೀರಿನಲ್ಲಿ ಸೇರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಜಲಚರಗಳು ಆಹಾರವೆಂದು ಸೇವಿಸಿ ಪ್ರಾಣಹಾನಿಗೊಳಗಾಗುವ ಸಾಧ್ಯತೆಯಿರುತ್ತದೆ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸುಡುವುದರಿಂದ ವಿಷಕಾರಿ ಅನಿಲಗಳು ಉತ್ಪತ್ತಿಯಾಗಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದರು.

ಪ್ಲಾಸ್ಟಿಕ್‌ನ ಮರುಬಳಕೆ ಹೇಗೆ ಮುಖ್ಯವೋ, ಪ್ಲಾಸ್ಟಿಕ್ ಬಳಕೆ ನಿಲ್ಲಿಸುವುದು ಅದಕ್ಕಿಂದ ಮುಖ್ಯ. ನಾಗರಿಕರಾಗಿ ನಾವು ಈ ನಿಟ್ಟಿನಲ್ಲಿ ಎಚ್ಚೆತ್ತುಕೊಳ್ಳಬೇಕು. ಏಕಬಳಕೆ ಪ್ಲಾಸ್ಟಿಕ್ ಬಳಸುವುದನ್ನು ನಿಲ್ಲಿಸುವುದು ನಮ್ಮ ಜವಾಬ್ದಾರಿ. ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಕೊಳ್ಳುವುದರ ಬದಲು ಬಾಟಲಿಯಲ್ಲಿ ನೀರನ್ನು ತೆಗೆದುಕೊಂಡು ಹೋಗುವುದು, ಸ್ಟ್ರಾ ಬಳಸದಿರುವುದು, ದಿನಸಿ, ತರಕಾರಿಗಳನ್ನು ಕೊಳ್ಳುವಾಗ ಅಂಗಡಿಯವರ ಬಳಿ ಪ್ಲಾಸ್ಟಿಕ್ ಕವರ್ ಅನ್ನು ಕೇಳದಿರುವುದು. ಬಟ್ಟೆಯ ಚೀಲಗಳನ್ನು ಬಳಸಬೇಕು ಎಂದರು.

ಈ ಸಂದರ್ಭದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜ ಅವರು, ತಲಕಾಯಲಬೆಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ಶ್ರೀನಿವಾಸ, ಹೊಸಪೇಟೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ಯಮುನಾ ರಾಣಿ, ತಲಕಾಯಲಬೆಟ್ಟ, ಹೊಸಪೇಟೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.

ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸೋಣ :-ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಮುನಿರಾಜು

Leave a Reply

Your email address will not be published. Required fields are marked *