ಭ್ರಷ್ಟ ಮಂತ್ರಿ ನಾಗೇಂದ್ರ ಅವರನ್ನು ವಜಾ ಮಾಡುವ ತನಕ ಹಗಲೂ ರಾತ್ರಿ ಧರಣಿ ಮುಂದುವರೆಯುವುದು ತ ರಾ ವೆಂಕಟೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ : ಬಿಜೆಪಿ ಘಟಕದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಛೇರಿ ಮುಂದೆ ಕಾಂಗ್ರೆಸ್ ಸರ್ಕಾರ ಹಾಗೂ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿ ಜೈಲಿಗೆ ಹೋಗಿ ಬಂದು ಬೆಲ್ ಮೇಲೆ ಇರುವ ನಾಗೇಂದ್ರ ರವರನ್ನು ಮಂತ್ರಿ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಪಕ್ಷದ ವತಿಯಿಂದ ಹಗಲು ರಾತ್ರಿ ಧರಣಿ ಹೋರಾಟವನ್ನು ಹಮ್ಮಿಕೊಂಡಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ರಾಮಕೃಷ್ಣಪ್ಪ ಬಿಜೆಪಿ ಸರ್ಕಾರದಿಂದ ನಾಗೇಂದ್ರರವರನ್ನ ರಾಜೀನಾಮೆ ಪಡೆಯುವ ತನಕ ಹಗಲು ರಾತ್ರಿ ಧರಣಿಯನ್ನ ಉಗ್ರವಾಗಿ ಮಾಡುತ್ತೇವೆ ಎಂದು ಎಚ್ಚರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ ರಾ ವೆಂಕಟೇಶ್ ರವರು ಮಾತನಾಡಿ ಕಾಂಗ್ರೆಸ್ ಸರ್ಕಾರದ ಮಂತ್ರಿ ಆಗಿರುವ ನಾಗೇಂದ್ರ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ವಾಲ್ಮೀಕಿ ನಿಗಮದಿಂದ 187 ಕೋಟಿ ಹಣವನ್ನು ಲೂಟಿ ಮಾಡಿ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕೊಟ್ಟಿರುವುದು ಇ ಡಿ ತನಿಖೆ ಮಾಡಿ ಇವರನ್ನು ಜೈಲಿಗೆ ಕಳಿಸಿದರು. ಕಾಂಗ್ರೆಸ್ ಲೂಟಿ ಮಾಡುವ ಸರ್ಕಾರ ಅಭಿವೃದ್ಧಿಯನ್ನು ಮಾಡದೆ ಲೂಟಿ ಮಾಡುತ್ತಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಯಾಗಿದ್ದ ಸಿದ್ದರಾಮಯ್ಯನವರು ಸದನದಲ್ಲಿ ಮಾತನಾಡುತ್ತ ನಾಗೇಂದ್ರ ಲೂಟಿ ಮಾಡಿರುವುದು ನಿಜ ಎಂದು ಒಪ್ಪಿಕೊಂಡು ಅವರ ರಾಜೀನಾಮೆಯನ್ನು ಪಡೆದರು ಇಂತಹ ಭ್ರಷ್ಟ ಮಂತ್ರಿಯನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು ಅಲ್ಲದೆ ಮುಂದಿನ ದಿನದಲ್ಲಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ರಾಯಚೂರಿನಿಂದ ಬಳ್ಳಾರಿಯವರೆಗೂ ಪಾದಯಾತ್ರೆ ಮಾಡುವುದಾಗಿ ತಿಳಿಸಿ ಭ್ರಷ್ಟ ಮಂತ್ರಿ ನಾಗೇಂದ್ರ ಅವರನ್ನು ವಜಾ ಮಾಡುವ ತನಕ ಹಗಲೂ ರಾತ್ರಿ ಧರಣಿ ಮುಂದುವರೆಯುವುದು ಎಂದು ತ ರಾ ವೆಂಕಟೇಶ್ ರವರು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗವೇಣಿ, ನೆಲಮಂಗಲ ತಾಲೂಕು ಬಿಜೆಪಿ ಅಧ್ಯಕ್ಷರಾದ ಚೌದರಿ , ಹಾಗೂ ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ದೇವನಗುಂದಿ ನಾರಾಯಣಸ್ವಾಮಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಬೃಂಗೇಶ್ , ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜಪ್ಪ, ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ನಾರಾಯಣಸ್ವಾಮಿ ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗೇಶ್, ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *