ಜಿಲ್ಲಾ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟಗಳಲ್ಲಿ ಮಿಂಚಿದ ಕೋಗಿಲಿನ ಆಕ್ಸ್ಫರ್ಡ್ ವಿದ್ಯಾರ್ಥಿಗಳು

ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ದ್ವಿತೀಯ ಸ್ಥಾನ – ವಿಭಾಗ ಮಟ್ಟಕ್ಕೆ ಫರಹಾನ್, ಅಯಾನ್ ಆಯ್ಕೆ

ಶ್ರೀನಿವಾಸಪುರ: ಆಕ್ಸ್ಫರ್ಡ್ ಇಂಗ್ಲಿಷ್ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಹ್ಯಾಂಡ್‌ಬಾಲ್, ಕರಾಟೆ ಹಾಗೂ ಅಥ್ಲೆಟಿಕ್ಸ್‌ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಕ್ರೀಡಾ ಪ್ರತಿಭೆ, ಶಿಸ್ತು ಹಾಗೂ ಪರಿಶ್ರಮವನ್ನು ಪ್ರದರ್ಶಿಸಿ ಪದಕಗಳನ್ನು ಗೆದ್ದಿದ್ದಾರೆ.

2026–27ನೇ ಸಾಲಿನ ಜಿಲ್ಲಾ ಮಟ್ಟದ ಹ್ಯಾಂಡ್‌ಬಾಲ್ ಕ್ರೀಡಾಕೂಟದಲ್ಲಿ ಆಕ್ಸ್ಫರ್ಡ್ ಇಂಗ್ಲಿಷ್ ಶಾಲೆಯ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ ಫರಹಾನ್ ಮತ್ತು ಅಯಾನ್ ಅವರು ಉತ್ತಮ ಪ್ರದರ್ಶನ ನೀಡಿ ವಿಭಾಗ ಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ

Leave a Reply

Your email address will not be published. Required fields are marked *