ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಅದ್ದೂರಿ ನವರಾತ್ರಿ ಉತ್ಸವ
ಯಲಹಂಕ ಸುದ್ದಿ. ದಿನಾಂಕ 14/10/26 ರಂದು ನಗರದ ಚೊಕ್ಕನಹಳ್ಳಿ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ನವರಾತ್ರಿ ಉತ್ಸವ ಹಾಗೂ ಆಯುಧ ಪೂಜೆಯನ್ನು ವಿಜೃಂಭಣೆಯಿಂದ ನಡೆಸಲಾಯಿತು. ದಸರಾ ಅಂಗವಾಗಿ ದಸರಾ ಗೊಂಬೆ ಪ್ರದರ್ಶನ, ಆಯುಧ ಪೂಜೆ, ಸರಸ್ವತಿ ಪೂಜೆ, ದಾಂಡಿಯಾ ನೃತ್ಯ, ಅಷ್ಟಲಕ್ಷ್ಮೀ ಸ್ತೋತ್ರ ಪಠಣ, ನವರಾತ್ರಿ ಹಿನ್ನೆಲೆಯ ರಸಪ್ರಶ್ನೆ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಸಮಾರಂಭದ ಆರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ ನಂದ ಎನ್ ಅವರು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ ನವರಾತ್ರಿ ಉತ್ಸವವು ನಮ್ಮ ಸಂಸ್ಕೃತಿ, ಸಂಪ್ರದಾಯದ ಉತ್ಸವವಾಗಿದ್ದು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಮೈಸೂರು ದಸರಾ ಹಬ್ಬ ಅತ್ಯಂತ ವೈಭವದಿಂದ ಬಹಳ ಹಿಂದಿನಿಂದಲೂ ನಡೆಯುತ್ತಿದ್ದು ನಮ್ಮ ಕಲೆ ಸಂಸ್ಕೃತಿಗೆ ಮೈಸೂರು ಒಡೆಯರ ಕೊಡುಗೆ ಅಪಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶ್ರೀ ಕೃಷ್ಣರಾಜ ಒಡೆಯರ್, ಶ್ರೀ ಜಯಚಾಮರಾಜೇಂದ್ರ ಒಡೆಯರ್ ಮುಂತಾದ ಮಹನೀಯರು ನಮ್ಮ ನಾಡಿನ ಕಲೆ, ಸಂಗೀತ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಸೇವೆ ಸಲ್ಲಿಸಿದ್ದಾರೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಎಂ ಬಜಾಜ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಿಂಧಿ ಸೇವಾ ಸಮಿತಿ ಹಾಗೂ ಸಮಸ್ತ ಸಿಂಧಿ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ ಎಫ್ ಮಾಧ್ವಾನಿಯವರು ಸಮಾರಂಭಕ್ಕೆ ಮುಂಚಿತವಾಗಿ ಆಗಮಿಸಿ ಪೂರ್ವಸಿದ್ಧತೆಗಳನ್ನು ಗಮನಿಸಿ ಹರ್ಷ ವ್ಯಕ್ತಪಡಿಸಿದರು. ಸಿಂಧಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಎಫ್ ಮಾಧ್ವಾನಿಯವರು, ಸಿಂಧಿ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಶೋಕ್ ಪಿ ನಾರಂಗ್ ಹಾಗೂ ಆಡಳಿತ ಮಂಡಳಿಯ ಎಲ್ಲ ಸದಸ್ಯರು ನವರಾತ್ರಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ಸಮಸ್ತ ವಿದ್ಯಾರ್ಥಿ ಸಮೂಹ ಸಂಭ್ರಮ ಸಡಗರದಿಂದ ಪಾಲ್ಗೊಂಡರು. ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಯಶಸ್ವಿಯಾಗಿ ಜರುಗಿತು.

Leave a Reply

Your email address will not be published. Required fields are marked *