ಮೈತ್ರಿ ಸರ್ವ ಸೇವಾ ಸಮಿತಿ ಬೆಂಗಳೂರು ವತಿಯಿಂದ ಯುನೆಟೆಡ್‌ ವೇ ಬೆಂಗಳೂರು ಬೆಂಬಲದೊಂದಿಗೆ ಆಯೋಜಿಸಿರುವ ಉಚಿತ ಹೊಲಿಗೆ ಯಂತ್ರ ಹಾಗೂ ಕುಕಿಂಗ್ ತರಬೇತಿ

ಬೆಂಗಳೂರು: ಮಹಿಳೆಯರ ಸ್ವಾವಲಂಬನೆ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಮೈತ್ರಿ ಸರ್ವ ಸೇವಾ ಸಮಿತಿ (ಬೆಂಗಳೂರು) ವತಿಯಿಂದ ಯುನೆಟೆಡ್‌ ವೇ ಬೆಂಗಳೂರು (United Way Bengaluru) ಸಹಯೋಗದೊಂದಿಗೆ ಉಚಿತ ಹೊಲಿಗೆ ಯಂತ್ರ ಮತ್ತು ಅಡುಗೆ (ಕುಕಿಂಗ್) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಯಲಹಂಕ ಸುದ್ದಿ. ದಿನಾಂಕ .22. 10 2026 ರಂದು. ಮೈತ್ರಿ ಸರ್ವ ಸೇವಾ ಸಮಿತಿ ಬೆಂಗಳೂರು ವತಿಯಿಂದ ಉಚಿತ ಕೌಶಲ್ಯ ತರಬೇತಿ ಪಡೆದ ನಿರುದ್ಯೋಗಿ ಯುವಕ-ಯುವತಿಯರು ಹಾಗೂ ಮಹಿಳೆಯರಿಗೆ ಪ್ರಮಾಣ ಪತ್ರ, ಹೊಲಿಗೆ ಯಂತ್ರ ಹಾಗೂ ಕುಕಿಂಗ್ ಉಪಕರಣಗಳ ವಿತರಣಾ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲ್ಲಾಲಸಂದ್ರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ತರಬೇತಿಯನ್ನು 5 ತಿಂಗಳಿಂದ ಹೊಲಿಗೆ ತರಬೇತಿ & ಕುಕಿಂಗ್ ತರಬೇತಿಯನ್ನು 80 ಫಲಾನುಭವಿಗಳನ್ನು ಸೇರಿಸಿ ತರಬೇತಿ ನೀಡಿ ಅವರಿಗೆ ಇಂದು ಉಚಿತವಾಗಿ ಹೊಲಿಗೆ ಯಂತ್ರ & ಕುಕಿಂಗ್ ಉಪಕರಣಗಳನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಯಲಹಂಕ ಕ್ಷೇತ್ರದ ಜನಪ್ರಿಯ ಶಾಸಕರಾದ S. R. ವಿಶ್ವನಾಥ್ ರವರು ಭಾಗವಹಿಸಿ, ಮಹಿಳೆಯರು ತರಬೇತಿ ಪಡೆದುಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ತಿಳಿಸಿದರು. ಈ ಸಂದರ್ಭದಲ್ಲಿ ಮೈತ್ರಿ ಸಂಸ್ಥೆಯ CEO ಹರೀಶ್ ಬಾಬು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮೈತ್ರಿ ಸಂಸ್ಥೆಯ ಅಧ್ಯಕ್ಷರಾದ ನಾರಾಯಣ ಭಟ್, ಮುರಳಿ, ವೆಂಕಟೇಶ್, , ಚಂದ್ರೇಗೌಡ , ಮುನಿಅಂಜಿನಪ್ಪ ಹಾಗೂ ಅಲ್ಲಾಳಸಂದ್ರ ಕೇಂದ್ರದ ಮುಖಂಡರು, ಗ್ರಾಮಾಸ್ಥರು, ಫಲಾನುಭವಿಗಳು, ಮೈತ್ರಿ ಸಂಸ್ಥೆಯ ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.