ದೊಡ್ಡಬಳ್ಳಾಪುರ : ಕನ್ನಡ ಕೇವಲ ಭಾಷೆಯಲ್ಲ ಅದು ನಮ್ಮೆಲ್ಲರ ಅಸ್ಮಿತೆ, ಭಾಷೆಯನ್ನು ಬೆಳೆಸಲು ಸಾಧ್ಯವಿಲ್ಲ ಬಳಸುವ ಮೂಲಕ ಮತ್ತಷ್ಟು ಹೆಚ್ಚು ಪ್ರಾಮುಖ್ಯತೆ ನೀಡಬಹುದು ಅಷ್ಟೇ, ನಮ್ಮ ಕನ್ನಡ ಭಾಷೆ ಸಮೃದ್ಧವಾಗಿದೆ. ಕನ್ನಡಿಗರಾದ ನಾವು ಭಾಷೆಯನ್ನು ಹೆಚ್ಚು ಬಳಸುವ ಮೂಲಕ ಗೌರವಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತದ ಹಿರಿಯ ವಿದ್ವಾಂಸರಾದ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ತಿಳಿಸಿದರು.

ಅವರು ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡಾಂಬೆ ಸಾಮಾಜಿಕ ಸಾಂಸ್ಕೃತಿಕ ಸಂಘದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಯನ ಸಭಾಂಗಣ (ರವೀಂದ್ರ ಕಲಾಕ್ಷೇತ್ರ) ದಲ್ಲಿ ಆಯೋಜನೆ ಮಾಡಲಾಗಿದ್ದ ಕನ್ನಡ ಹಬ್ಬ -2026 ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕನ್ನಡಕ್ಕೆ ಸಂದಿರುವ ಶಾಸ್ತ್ರೀಯ ಭಾಷೆಯ ಗೌರವವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಅದನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಎಲ್ಲರೂ ಕೈಜೋಡಿಸಬೇಕು ಎಂದರು.

ಕನ್ನಡ ರಾಜ್ಯೋತ್ಸವ ಎಂದರೆ ಸಂಭ್ರಮ, ಕನ್ನಡವೇ ಹಾಗೆ ನಮ್ಮ ನುಡಿ ಸುಮಧುರವಾದುದ್ದು, ಇಂದು ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಆಯೋಜನೆ ಮಾಡಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ಅತ್ಯಂತ ಅರ್ಥಪೂರ್ಣವಾಗಿದೆ. ಈ ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನಿಸುವ ಮೂಲಕ ನಿಜವಾದ ಕನ್ನಡಿಗರಿಗೆ ಗೌರವಸರಿಸಲಾಗುತ್ತಿದೆ ಗುಣವಂತ ಮಂಜು ಅವರ ಈ ಕಾರ್ಯವು ನಿರಂತರವಾಗಿ ಸಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಆಯೋಜಕ ಗುಣವಂತ ಮಂಜು ಮಾತನಾಡಿ ನಮ್ಮ ಪ್ರತಿಷ್ಠಾದ ವತಿಯಿಂದ ಈಗಾಗಲೇ ಶ್ರೀಲಂಕಾ ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದೇವೆ. ನಮ್ಮ ಕಾರ್ಯಕ್ರಮಗಳಿಗೆ ಸಹಕಾರ ನೀಡುವ ಎಲ್ಲರಿಗೂ ಈ ಮೂಲಕ ಧನ್ಯವಾದಗಳು ಅರ್ಪಿಸುತ್ತೇನೆ. ಇಂದಿನ ಕಾರ್ಯಕ್ರಮ ವಿಶೇಷವಾಗಿದ್ದು ಕರ್ನಾಟಕದ ಮೂಲೆ ಮೂಲೆಗಳಲ್ಲಿ ತಮ್ಮದೇ ರೀತಿಯಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಗಣ್ಯರ ಮೂಲಕ ಸನ್ಮಾನಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ ಯಾವುದೇ ಅಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಸಾವಿರಾರು ಸಾಧಕರಿಗೆ ಇದು ಸ್ಪೂರ್ತಿಯಾಗಲಿದೆ ಎಂದರು.

ಅನ್ನದಾಸೋಹಿ ಮಲ್ಲೇಶ್ ರವರಿಗೆ ಕರ್ನಾಟಕ ರಾಜ್ಯ ದಾಸೋಹ ರತ್ನ ಪ್ರಶಸ್ತಿ ಪ್ರಧಾನ

ದೊಡ್ಡಬಳ್ಳಾಪುರ ತಾಲೂಕಿನ ದರ್ಗಾ ಜೋಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರಂತರ 2430 ದಿನಗಳಿಂದ ಅನ್ನದಾಸೋಹ ಮಾಡುತ್ತಿರುವ ಎಲ್. ಮಲ್ಲೇಶ್ ರವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಕನ್ನಡಾಂಬೆ ಸಾಮಾಜಿಕ ಸಾಂಸ್ಕೃತಿಕ ಸಂಘದ ವತಿಯಿಂದ ಕರ್ನಾಟಕ ರಾಜ್ಯ ದಾಸೋಹ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾಜ ಸೇವಕರು ಪತ್ರಕರ್ತರು ಆದ ಟಿವಿ ಸಂಪಂಗಿ ಮಾತನಾಡಿ ಈ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ವಿಶೇಷವಾಗಿದೆ ಈ ಕಾರ್ಯಕ್ರಮದಲ್ಲಿ ಸಾಧಕರು ಸಾಹಿತಿಗಳು ಕಲಾವಿದರು ಪತ್ರಕರ್ತರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಲವು ಸಾಧಕರು ಉಪಸ್ಥಿತರಿದ್ದಾರೆ. ಅಲ್ಲದೆ ಯಾರೂ ಗುರುತಿಸದ ಸಾಧಕರನ್ನು ನಮ್ಮ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಗುರುತಿಸಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಸಾಧಕರಿಗೆ ಮತ್ತಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಉಮ್ಮಸ್ಸು ಸ್ಪೂರ್ತಿ ನೀಡುತ್ತವೆ. ವಿಶೇಷವಾಗಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಿರಂತರ ಅನ್ನದಾಸೋಹ ನಡೆಸುತ್ತಿರುವ ಮಲ್ಲೇಶ್ ರವರಿಗೆ ದಾಸೋಹ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಮೂಲಕ ಮಲ್ಲೇಶ್ ರವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ನಮ್ಮ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಮಾಡಿದೆ ಎಂದರು.

ಕಾರ್ಯಕ್ರಮದಲ್ಲಿ ಮಲ್ಲೇಪುರ ವೆಂಕಟೇಶ್, ನಿರ್ದೇಶಕರಾದ ವರಲಕ್ಷ್ಮಿ, ಪವಿತ್ರ ಹಿರೇಮಠ, ಜಾನ್ವಿ, ಕು.ಭಾರತಿ, ಡಾ. ಸಂಪಂಗಿ ಟಿ. ವಿ., ಪ್ರವೀಣ್ ಕುಮಾರ್, ಶಶಿಧರ್ ಹಿರೇಮಠ, ಗೋವಿಂದರಾಜು, ನಿತ್ಯ, ಶಿವ ಸ್ವರೂಪ್, ಯಶಸ್, ಛಾಯಾಗ್ರಾಹಕ ಚಂದ್ರು ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *