ಸಿಂಧಿ ಪದವಿ ಪೂರ್ವ ಕಾಲೇಜಿನಲ್ಲಿ ವೈಭವಯುತ ಗುರುವಂದನಾ ಸಮಾರಂಭ ಹಾಗೂ ಸಿಂಟ್ರಾನಿಕ ಸಾಂಸ್ಕೃತಿಕ ಸಂಭ್ರಮ
ಬೆಂಗಳೂರು: ಚೊಕ್ಕನಹಳ್ಳಿ–ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಸಿಂಧಿ ಪದವಿಪೂರ್ವ ಕಾಲೇಜಿನಲ್ಲಿ ಇದೇ ತಿಂಗಳ 24, 25 ಮತ್ತು 26ರಂದು ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
24ರಂದು ಗುರುವಂದನಾ ಕಾರ್ಯಕ್ರಮ, 25 ಮತ್ತು 26ರಂದು ಸಿಂಟ್ರಾನಿಕಾ ಅಂತರ್ ಶಾಲಾ ಹಾಗೂ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.
ಗುರುವಂದನಾ ಕಾರ್ಯಕ್ರಮದಲ್ಲಿ ನಗರದ ಪ್ರತಿಷ್ಠಿತ ಪ್ರೌಢಶಾಲೆಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು ಹಾಗೂ ಹಿರಿಯ ಶಿಕ್ಷಕರು ಭಾಗವಹಿಸಲಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಅಮೂಲ್ಯ ಸೇವೆ ಹಾಗೂ ಕೊಡುಗೆಯನ್ನು ಗುರುತಿಸಿ, ಕಾರ್ಯಕ್ರಮದಲ್ಲಿ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ನಂದಾ ಎನ್. ಅವರು ತಿಳಿಸಿದ್ದಾರೆ.
25 ಮತ್ತು 26ರಂದು ನಡೆಯಲಿರುವ ಸಿಂಟ್ರಾನಿಕಾ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಗರದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಿಂಧಿ ಕಾಲೇಜಿನ ಆಡಳಿತ ಮಂಡಳಿ ಮನವಿ ಮಾಡಿದೆ.

Leave a Reply

Your email address will not be published. Required fields are marked *