ಆರ್.ಕೆ. ಗಾರ್ಡನ್ ನಿವಾಸಿಗಳ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಂಗಳೂರು: ನಗರದ ಆರ್.ಕೆ. ಗಾರ್ಡನ್ ನಿವಾಸಿಗಳ ಸಂಘದ ವತಿಯಿಂದ ಶನಿವಾರ (ನವೆಂಬರ್ 21, 2026) ಸಂಜೆ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಉಪಮುಖ್ಯಮಂತ್ರಿಗಳು. ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್. ಆರ್.ಕೆ. ಗಾರ್ಡನ್ ನಿವಾಸಿಗಳ ಸಂಘದ ಅಧ್ಯಕ್ಷರಾದ ಶಾಲಿನಿ ಮೇಡಂ ಸೇರಿದಂತೆ ಇನ್ನೂ ಅನೇಕ ಗಣ್ಯರು ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಿವಾಸಿಗಳ ಸಂಘಗಳ ಇಂತಹ ಕಾರ್ಯಕ್ರಮಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಮಾಜಿ ಕಾರ್ಪೊರೇಟರ್‌ಗಳಾದ ಶ್ರೀ ಎಂ.ಸಿ. ಜಯಪ್ರಕಾಶ್ ಹಾಗೂ ಶ್ರೀ ಮುನಿಸ್ವಾಮಿ ಗೌಡ ಹಾಗೂ ಇನ್ನು ಅನೇಕ ಗಣ್ಯರು. ಮತ್ತು ಸಿಂಧಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರಕಾಶ್ ಎಫ್ ಮಾಧ್ವಾನಿಯವರು, ಅವರು ಪಾಲ್ಗೊಂಡಿದ್ದರು. ರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡಿನ ಖ್ಯಾತ ಹಾಸ್ಯ ಸಾಹಿತಿಗಳು ಹಾಗೂ ಬರಹಗಾರರಾದ ಶ್ರೀ ಎಂ.ಎಸ್. ನರಸಿಂಹಮೂರ್ತಿ ಮತ್ತು ಶ್ರೀ ವೈ.ವಿ. ಗುಂಡೂರಾವ್ ಅವರು ತಮ್ಮ ಹಾಸ್ಯ ಚಟಾಕಿಗಳ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿದರು.
ಸಂಜೆ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ನಡೆದ ಈ ಕಾರ್ಯಕ್ರಮದಲ್ಲಿ ಆರ್.ಕೆ. ಗಾರ್ಡನ್ ನಿವಾಸಿಗಳ ಸಂಘದ ಪದಾಧಿಕಾರಿಗಳು, ಮಹಿಳಾ ಸದಸ್ಯರು ಹಾಗೂ ಬಡಾವಣೆಯ ನಾಗರಿಕರು ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ. ಭಾಗವಹಿಸಿ ಕನ್ನಡ ಹಬ್ಬವನ್ನು ಯಶಸ್ವಿಗೊಳಿಸಿದರು. ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು

Leave a Reply

Your email address will not be published. Required fields are marked *