ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಯಲಹಂಕ ತಾಲೂಕಿನ ವತಿಯಿಂದ ಕಿದ್ವಾಯಿ ಆಸ್ಪತ್ರೆಯ ಮಕ್ಕಳಿಗೆ ಬೆಡ್‌ಶೀಟ್ ವಿತರಣೆ
ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕಾರ್ಯಕರ್ತರ ವತಿಯಿಂದ *ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 100ಮಕ್ಕಳಿಗೆ ಬೆಡ್‌ಶೀಟ್‌ಗಳನ್ನು ವಿತರಿಸುವ* ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಮಕ್ಕಳಿಗೆ ಬೆಡ್‌ಶೀಟ್‌ಗಳನ್ನು ವಿತರಿಸಿ, ಅವರ ಆರೋಗ್ಯ ಮತ್ತು ಶೀಘ್ರ ಗುಣಮುಖತೆಗಾಗಿ ಹಾರೈಸಲಾಯಿತು.
ಸಮಾಜದಲ್ಲಿ ಸೇವಾ ಮನೋಭಾವನೆ, ಮಾನವೀಯತೆ ಹಾಗೂ ಪರೋಪಕಾರದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಹುಟ್ಟುಹಬ್ಬವನ್ನು  ಅಗತ್ಯವಿರುವವರಿಗೆ ನೆರವಾಗುವ ಮೂಲಕ ಆಚರಿಸಿರುವುದು ವಿಶೇಷವಾಗಿತ್ತು.ಕಾರ್ಯಕ್ರಮ ದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಯ   ನಿರ್ದೇಶಕರು ರಾಧಾ ಉಮಾರಬ್ಬ  ಯಲಹಂಕ ತಾಲ್ಲೂಕು ಯೋಜನಾಧಿಕಾರಿಯಾದ ಸವಿತ ಶೆಟ್ಟಿ ಹಾಗೂ ತಾಲೂಕಿನ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *