



ಯಲಂಕ ಸುದ್ದಿ. ಸಂವಿಧಾನ ವೃತ್ತ (ಬೆಳ್ಳೆಹಳ್ಳಿ ಕ್ರಾಸ್ )ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮುನಾಜಿನಪ್ಪ ಹಾಗೂ ಎನ್ ನರಸಿಂಹಮೂರ್ತಿ ರವರು. ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸುವ ಮೂಲಕ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನೀಲಿ ಶಾಲು ಧರಿಸಿ ಆಗಮಿಸಿದ್ದ ವಿವಿಧ ಗ್ರಾಮದ ಮುಖಂಡರು ಹಾಗೂ ಅಂಬೇಡ್ಕರ್ ಅಭಿಮಾನಿಗಳು ಒಗ್ಗೂಡಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಅರ್ಪಿಸಿದರು.
ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಹಕ್ಕುಗಳನ್ನು ನೀಡಿದೆ. ಜಗತ್ತಿನಲ್ಲಿಯೇ ಅತ್ಯುತ್ತಮ ಸಂವಿಧಾನವೆಂದು ಹೆಗ್ಗಳಿಕೆ ಪಡೆದಿರುವ ನಮ್ಮ ದೇಶದ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನವನ್ನು ಕಾಪಾಡೋಣ, ಸಂವಿಧಾನದ ಆಶಯಗಳನ್ನು ಉಳಿಸೋಣ ಎಂಬ ಸಂದೇಶದೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಜಾಗೃತಿ ಮೂಡಿಸಿದರು. ಕಾರ್ಯಕ್ರಮ ಎನ್ ನರಸಿಂಹಮೂರ್ತಿ ರವರ ಅಧ್ಯಕ್ಷತೆಯಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು
ಜೈ ಭೀಮ್ – ಜೈ ಸಂವಿಧಾನ.
