ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ 63 ಏಕಗವಾಕ್ಷಿ ಕೇಂದ್ರಗಳ ಸ್ಥಾಪನೆ : ಮುಖ್ಯ ಆಯುಕ್ತರು -:

ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡುವ ಕುರಿತು ಹಾಗೂ ಹಬ್ಬಗಳ ಆಚರಣೆಯಿಂದ ಬರುವ ಹಸಿತ್ಯಾಜ್ಯವನ್ನು ಪಾಲಿಕೆಯ ಸಂಸ್ಕರಣಾ ಘಟಕಗಳಿಗೆ ಸಂಸ್ಕರಣೆಗಾಗಿ ಕಳುಹಿಸುವ ನಿಮಿತ್ತ ಹಾಗೂ ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ವಲಯ ಅಧಿಕಾರಿಗಳು ತೆಗೆದುಕೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕಛೇರಿ ಆದೇಶವನ್ನು ಹೊರಡಿಸಿರುತ್ತಾರೆ.

ಗಣೇಶ ಚತುರ್ಥಿ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ಪಡೆಯುವ ಬಗ್ಗೆ:

ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಅಂಗವಾಗಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಕಾರ್ಯಕ್ರಮ ಆಯೋಜಿಸುವ ಸಂಬಂಧ, ಬಿಬಿಎಂಪಿ, ಬೆಸ್ಕಾಂ, ಪೊಲೀಸ್ ಹಾಗೂ ಆಗ್ನಿಶಾಮಕ ಇಲಾಖೆಗಳನ್ನು ಒಳಗೊಂಡಂತೆ 63 ಉಪ ವಿಭಾಗಗಳಲ್ಲಿ ಏಕಗವಾಕ್ಷಿ ಕೇಂದ್ರಗಳ ಮೂಲಕ ಪೂರ್ವಾನುಮತಿ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಬರುವ ಅರ್ಜಿಗಳನ್ನು ಪರಿಶೀಲಿಸಿ ಶೀಘ್ರವಾಗಿ ಅನುಮತಿ ನೀಡುವ ಸಲುವಾಗಿ ಏಕಗವಾಕ್ಷಿ ಪದ್ದತಿ ಜಾರಿಗೊಳಿಸಲಾಗಿದೆ. ಸದರಿ ಏಕಗವಾಕ್ಷಿ ಕೇಂದ್ರಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಅಗತ್ಯ ದಾಖಲೆಗಳನ್ನು ಅರ್ಜಿಯೊಂದಿಗೆ ಒದಗಿಸಿ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಆದೇಶ, 63 ಏಕಗವಾಕ್ಷಿ ಕೇಂದ್ರಗಳ ಮಾಹಿತಿ ಹಾಗೂ ಇಲಾಖಾವಾರು ನೋಡಲ್ ಅಧಿಕಾರಿಗಳ ವಿವರಗಳು ಮತ್ತು ದೂರವಾಣಿ ಸಂಖ್ಯೆಯನ್ನು ಲಗತ್ತಿಸಿದೆ.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.