ಬಳ್ಳಾರಿ,ಸೆ.12
ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾಗಿ ಜಡಿಯಪ್ಪ.ಜಿ ಅವರು ಮಂಗಳವಾರ ಅಧಿಕಾರ ಸ್ವೀಕಾರ ಮಾಡಿದರು.
ಈವರೆಗೆ ಕಚೇರಿಯ ಪ್ರಭಾರಿ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ, ಚಿತ್ರದುರ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ತುಕರಾಂ ರಾವ್ ಬಿ.ವಿ ಅವರು ಅಧಿಕಾರವನ್ನು ಹಸ್ತಾಂತರಿಸಿದರು.
ಇದಕ್ಕೂ ಮುಂಚೆ ಜಡಿಯಪ್ಪ.ಜಿ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರವು ಇವರಿಗೆ ಮುಂಬಡ್ತಿ ನೀಡಿ, ಬಳ್ಳಾರಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

2ನೇ ಸುದ್ದಿ ಸಾರ್,

Leave a Reply

Your email address will not be published. Required fields are marked *