ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರದ ಡಿಪಿವಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಮಟ್ಟದ ಗ್ರಾಮ ಪಂಚಾಯಿತಿ ಪ್ರಮುಖರು ಹಾಗೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸೇವಕರಾದ ಶ್ರೀ ರಾಮಲಿಂಗಪ್ಪನವರು ಭಾಗವಹಿಸಿದರು. ಈ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ. ರವಿ, ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ವಿನಯ್ ಬಿದ್ರೆ ,ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎ. ವಿ. ನಾರಾಯಣಸ್ವಾಮಿ, ವಿಭಾಗ ಸಂಘಟನಾ ಕಾರ್ಯದರ್ಶಿ ಕಾಂತರಾಜ್, ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ಗ್ರಾಮ ಪಂಚಾಯಿತಿ ಪ್ರಮುಖರು, ಹಾಗೂ ಇತರ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *