ಬಿಬಿಎಂಪಿ ವತಿಯಿಂದ ಏಕಗವಾಕ್ಷಿ ಕೇಂದ್ರ, ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ಸ್ಥಾಪನೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ. ಸದರಿ ವ್ಯವಸ್ಥೆಯ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅದರ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ವೆಬ್ ಸೈಟ್ https://apps.bbmpgov.in/ganesh2023/ ನಲ್ಲಿ ಅಥವಾ ಬಿಬಿಎಂಪಿ ಸಹಾಯವಾಣಿ 1533ಗೆ ಕರೆಮಾಡಿ ವಿವರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರತಿಗಳನ್ನು ಲಗತ್ತಿಸಿದೆ.