ಧಾರವಾಡ ಜಿಲ್ಲೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯ ಹುಬ್ಬಳ್ಳಿ ಶಹರ ವಲಯ ಆಯೋಜಿಸಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ 2023-24 ಕಾರ್ಯಕ್ರಮದಲ್ಲಿ ಬಿ ವಿ ಕೆ ವಿ ಸ ಬಿ ಬಾಲಕಿಯರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಾವಿತ್ರಿ ಚ ಮಾನೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಆಶು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
[26/09, 5:28 pm] Rep. Hubbali Nadap: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
ಅ.1 ರಂದು ಕೊಪ್ಪಳದಲ್ಲಿ ಸಂಘದ ಸರ್ವ ಸದಸ್ಯರ ವಿಶೇಷ ಸಭೆ
ಧಾರವಾಡ :- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೈಲಾ ಉಪವಿಧಿಗಳು-2022 ರ ಕೆಲವು ಉಪವಿಧಿಗಳಿಗೆ ತಿದ್ದುಪಡಿ ತರಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆಯನ್ನು ಅ.1 ರಂದು ಸದಸ್ಯರ ಉಪಸ್ಥಿತಿ, ವರ್ಚುವಲ್ ವಿಧಾನದ ಮೂಲಕ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಧಾರವಾಡ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಅ. 1 ರಂದು ಬೆಳಿಗ್ಗೆ 11 ಗಂಟೆಗೆ ಕೊಪ್ಪಳದ ಹಿರೇಸಿಂದೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ ನಡೆಯಲಿದ್ದು, ಧಾರವಾಡ ಜಿಲ್ಲೆಯ ಸರ್ವಸದಸ್ಯರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.
ಖುದ್ದಾಗಿ ಸಭೆಗೆ ಹಾಜರಾಗಲು ಸಾಧ್ಯವಾಗದ ಸದಸ್ಯರು, ವರ್ಚುವಲ್ ವೇದಿಕೆ ಮೂಲಕ ಭಾಗವಹಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದ್ದು,https://bit.ly/ksgeasplgbm ಲಿಂಕ್ ಅನ್ನು ಬಳಸಿ ಸಭೆಯಲ್ಲಿ ಭಾಗವಹಿಸಬಹುದು. ಉದ್ದೇಶಿತ ತಿದ್ದುಪಡಿ ಉಪವಿಧಿಗಳ ಸಂಪೂರ್ಣ ವಿವರಗಳನ್ನು ನೋಟೀಸ್ನೊಂದಿಗೆ ಸದಸ್ಯರ ಮೊಬೈಲ್ ಸಂಖ್ಯೆಗೆ ಸಾಫ್ಟ್ ಪ್ರತಿಯನ್ನು ಈಗಾಗಲೇ ಕಳುಹಿಸಲಾಗಿದೆ. ಆದಾಗ್ಯೂ ಉದ್ದೇಶಿತ ತಿದ್ದುಪಡಿ ಕರಡು ಉಪವಿಧಿಗಳ ಪ್ರತಿ ಅಗತ್ಯವಿದ್ದಲ್ಲಿ ಸಂಘದ ಕಚೇರಿಯಲ್ಲಿ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಘದ ಕೇಂದ್ರ ಕಚೇರಿಯ ವ್ಯವಸ್ಥಾಪಕ ಸಂಜಯ್-ಮೊ.ಸಂ:8861169056 ಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
