ಧಾರವಾಡ:- ಜಿಲ್ಲೆಯಾದ್ಯಂತ ನಾಳೆಯೂ (ಸೆ.29) ಎಂದಿನಂತೆ ಶಾಲೆ, ಕಾಲೇಜು, ಸರಕಾರಿ ಕಚೇರಿಗಳು ಕರ್ತವ್ಯ ನಿರ್ವಹಿಸುತ್ತವೆ. ನಾಗರಿಕರಿಗೆ ಸಾರಿಗೆ, ಔಷಧಿ ಸೇರಿದಂತೆ ಎಲ್ಲ ಅಗತ್ಯ ಸೇವೆಗಳ ಪೂರೈಕೆಯಲ್ಲಿ ಯಾವುದೇ ಅಡಚನೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಾಳೆಯ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಪೊಲೀಸ್ ಕಮಿಷನರ್ ಹಾಗೂ ಎಸ್.ಪಿ. ಅವರ ನೇತೃತ್ವದಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿಬ್ಬಂದಿ, ಮೀಸಲು ಪೊಲೀಸ್ ಪಡೆ ನಿಯೋಜಿಸಿ, ಸೂಕ್ತ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದೆ.

ಸಾರ್ವಜನಿಕರಿಗೆ ಮತ್ತು ಇತರೆ ತೊಂದರೆಗಳು ಉಂಟಾಗದಂತೆ ಪ್ರತಿಭಟನಾಕಾರರು ಶಾಂತ ರೀತಿಯಲ್ಲಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಲು ಸೂಚಿಸಲಾಗಿದೆ.
ಪ್ರತಿಭಟನಾಕಾರರು ಸಹ ಶಾಂತ ರೀತಿಯಲ್ಲಿ ಪ್ರತಿಭಟಿಸಿ, ಸಹಕಾರ ನೀಡುವುದಾಗಿ ಹೇಳಿದ್ದಾರೆ.
ಸಾರ್ವಜನಿಕರು ಯಾವುದೇ ಗೊಂದಲಗಳಿಗೆ ಒಳಗಾಗದೆ ದಿನನಿತ್ಯದ ಕಾರ್ಯಗಳನ್ನು ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *