*ಮಹಾತ್ಮಗಾಂಧಿ ಜಯಂತಿ ದಿನಾಚರಣೆ ಅಂಗವಾಗಿ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆಗೆ ಮಾನ್ಯ *ಆಡಳಿತಗಾರರಾದ ರಾಕೇಶ್ ಸಿಂಗ್,* ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಅರ್ಪಿಸಿದರು.*
ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮದಲ್ಲಿ ಪ್ರತಿಭಾ ಬಾಲಮಂದಿರ ಮಕ್ಕಳಿಂದ ಗೀತ ವಾಚನ, ಶ್ರೀಮತಿ ದೀಪಿಕಾ ಶ್ರೀಕಾಂತ್ ರವರಿಂದ ವೈಷ್ಣವ ಜನತೋ, ಹಡ್ಸನ್ ಚರ್ಚಿನ ಫಾದರ್ ಶ್ರೀ ರೆವೆರೆಂಡ್ ಆಲ್ಫ್ರೆಡ್ ಸುದರ್ಶನ್ ಮತ್ತು ತಂಡದಿಂದ ಬೈಬಲ್ ವಾಚನ, ಗುರುದ್ವಾರದ ಶ್ರೀ ಗುರುಸಿಂಗ್ ಸಭಾ ಮತ್ತು ತಂಡದವರಿಂದ ಗುರು ಗ್ರಂಥ ವಾಚನ, ಮೌಲ್ವಿ ಹಫೀಜ್ ಶಾಬೀರ್ ಹುಸೇನ್ ರವರಿಂದ ಖುರಾನಿನ ವಾಚನ ಮಾಡಲಾಯಿತು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಉಪ ಆಯುಕ್ತರಾದ ಮಂಜುನಾಥ್ ಸ್ವಾಮಿ, ಪೂರ್ವ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತರಾದ ಪ್ರತಿಭಾ, ಮಾಜಿ ಸಚಿವರಾದ ಶ್ರೀ ರಾಮಚಂದ್ರೇಗೌಡ್ರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



