ಈ ಕುರಿತು ಮಾಹಿತಿ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ, ” ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರತಿ ವರ್ಷದಂತೆ ಈ ಬಾರಿಯೂ ಗಾಂಧಿಜಯಂತಿ ದಿನದಂದು ಅತ್ಯುತ್ತಮ ಗ್ರಾಮ ಪಂಚಾಯತಿಗಳಿಗೆ ” ಗಾಂಧಿ ಗ್ರಾಮ ಪುರಸ್ಕಾರʼಗಳನ್ನು ನೀಡಲಾಗಿದೆ. ಈ ಬಾರಿ ತಾಲ್ಲೂಕಿನ ಬೈರಾಪುರ ಗ್ರಾಮ ಪಂಚಾಯಿತಿಗಳು ಆಯ್ಕೆಯಾಗಿದೆ.
ಆಯ್ಕೆಯಾದ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ಪತ್ರವನ್ನು ವಿಧಾನಸೌಧದ ಬ್ಯಾಂಕ್ವಟ್‌ಹಾಲ್‌ ಸಭಾಂಗಣದಲ್ಲಿ ಅ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ ಮಾಡಿದರು.

ವಿವಿಧ ಮಾನದಂಡದ ಮೂಲಕ ಆಯ್ಕೆ

ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲು ಕೆಲವಾರು ಮಾನದಂಡಗಳನ್ನು ಅನುಸರಿಸಲಾಗಿದೆ. ಜನರ ಗುಣಮಟ್ಟ ಸುಧಾರಣೆ, ಸಂಪನ್ಮೂಲ ಕ್ರೋಢೀಕರಣ, ಕುಡಿಯುವ ನೀರು, ಶೌಚಾಲಯ, ನೈರ್ಮಲ್ಯ, ರಸ್ತೆ, ಬೀದಿ ದೀಪಗಳ ನಿರ್ವಹಣೆ; ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಹಾಗೂ ಮನೆ ಮನೆಗಳಿಂದ ಘನ ತ್ಯಾಜ್ಯ ಸಂಗ್ರಹಿಸಲು ಉಪಯೋಗಿಸುವ ವಾಹನಕ್ಕೆ ಮಹಿಳಾ ಚಾಲಕರನ್ನು ನೇಮಕ ಮಾಡುವಲ್ಲಿ ಕೈಗೊಂಡಿರುವ ಕ್ರಮಗಳನ್ನು ಆಧರಿಸಿ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ.

ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಜನರಿಗೆ ಒದಗಿಸಿರುವ ಮೂಲ ಸೌಕರ್ಯಗಳು ಹಾಗೂ ಸೇವೆಗಳ ಜೊತೆಗೆ ಉತ್ತಮ ಆಡಳಿತ ನೀಡುವುದನ್ನು ಸಹ ಆಯ್ಕೆಗೆ ಪರಿಗಣಿಸಲಾಗಿದ್ದು, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡಲಾಗುತ್ತಿರುವ ಸೇವೆಗಳ ಬಳಕೆ ಮಾಡಿಕೊಳ್ಳಲು ನೀಡುತ್ತಿರವ ಮಾರ್ಗದರ್ಶನ, ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಡಿಜಿಟಲೀಕರಣ, ‘ಓದುವ ಬೆಳಕು’ ಕಾರ್ಯಕ್ರಮದ ಮೂಲಕ ಮಕ್ಕಳನ್ನು ಅರಿವು ಕೇಂದ್ರಗಳತ್ತ ಆಕರ್ಷಿಸಲು ಕೈಗೊಂಡಿರುವ ಕ್ರಮಗಳು ಸಹ ಗ್ರಾಮ ಪಂಚಾಯತಿಗಳನ್ನು ಪುರಸ್ಕಾರಕ್ಕೆ ಪರಿಗಣಿಸುವಲ್ಲಿ ಮಾರ್ಗಸೂಚಿಗಳಾಗಿವೆ ಈ ಎಲ್ಲಾ ಮಾನದಂಡದ ಮೇಲೆ ಬೈಚಾಪುರ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

ಆಯ್ಕೆ ಮಾಡಿದ್ದು ಹೇಗೆ?
ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾಮಪಂಚಾಯತಿಗಳನ್ನು ಆಯ್ಕೆ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ, ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳಿಗನುಗುಣವಾಗಿ ಪ್ರತಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಗಳಿಸಿರುವ ಐದು ಗ್ರಾಮ ಪಂಚಾಯತಿಗಳನ್ನು ಆರಿಸಿ, ಸ್ಥಳ ಪರಿಶೀಲನೆ ಹಾಗೂ ದಾಖಲಾತಿ ಪರಿಶೀಲನೆ ಮಾಡಿ, ಆಯಾ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.
ಐದು ಲಕ್ಷ ಪ್ರೋತ್ಸಾಹ ಧನ
ʼಗಾಂಧಿ ಗ್ರಾಮ ಪುರಸ್ಕಾರ’ಕ್ಕೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ , ಸ್ಮರಣಿಕೆ ಹಾಗೂ 5 ರೂ. ಲಕ್ಷ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕಾ ಖರ್ಗೆ ಮಾಹಿತಿ ನೀಡಿದ್ದರು.

: ಬಾಕ್ಸ್ ಬಳಸಿ ಸರ್.
ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಬೈಚಾಪುರ ಗ್ರಾಮ ಪಂಚಾಯಿತಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳನ್ನು ಸಮಾನ ಕೆಲಸಕ್ಕೆ ಸಮಾನ ಕೂಲಿಯನ್ನು ನೀಡಿ ಮಹಿಳೆಯರಿಗೆ ಶೇ 50 ರಷ್ಟು ಆದ್ಯತೆಯನ್ನು ನೀಡಿ,
ಎನ್ಆರ್ ಐಜಿ ಕೆಲಸಗಳಲ್ಲಿ ಉತ್ತಮವಾದ ಪ್ರಗತಿಯನ್ನು ಸಾಧಿಸಿದ್ದಾರೆ.ಈ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವಂತಹ ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳಾದ ಕುಡಿಯುವನೀರು,ಗ್ರಾಮಸ್ವಚ್ಛತೆ ಮತ್ತು ಅಮೃತ ಸರೋವರ ಸೇರಿದಂತೆ ಇನ್ನು ಅನೇಕ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಯಾವುದೇ ಕುಂದುಕೊರತೆ ಬರದಂತೆ ಅನುಕೂಲ ಮಾಡಿಕೊಂಡು ದಾಖಲಾತೆಗಳನ್ನು ಸಮಪರ್ಕವಾಗಿ ನಿರ್ವಹಿಸಿವುದ್ದರಿಂದ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಬೈಚಾಪುರ ಗ್ರಾಮ ಪಂಚಾಯಿತಿಯು ಗಾಂಧಿ ಗ್ರಾಮ ಪುರಸ್ಕಾರಕ್ಕೆ ನಮ್ಮ ಸಿಇಒ ಪ್ರಭು ರವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ .

ದೊಡ್ಡಸಿದ್ದಯ್ಯಇಓ ಕೊರಟಗೆರೆ.

Leave a Reply

Your email address will not be published. Required fields are marked *