ಬೆಂಗಳೂರು ಗ್ರಾಮಾಂತರ ವಿಭಾಗ, ಆವತಿ ಗ್ರಾಮ ಪಂಚಾಯ್ತಿಯಲ್ಲಿ ಇಂದು ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ವಿಕಸಿತ ಭಾರತ ಸಂಕಲ್ಪ ಯಾತ್ರೆ (ವೀಡಿಯೋ ವಾಹನ)ಯನ್ನು ಕೇಂದ್ರ ಸಚಿವ ನಾಗರಿಕ ವಿಮಾನಯಾನ ಮತ್ತು ಉಕ್ಕಿನ ಸಚಿವರಾದ ಶ್ರೀ. ಜ್ಯೋತಿರಾದಿತ್ಯ ಎಂ. ಸಿಂಧಿಯಾ ಹಾಗೂ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ರವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ರಾಮಲಿಂಗಪ್ಪ, ದೇವನಹಳ್ಳಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *