ಪಾವಗಡ : ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಆದ್ದರಿಂದ ಈ ಮಕ್ಕಳಿಗೆ ಹೆಚ್ಚಿನ ಶಿಕ್ಷಣವನ್ನು ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕರಾದ ಎಚ್ ವಿ ವೆಂಕಟೇಶ್ ತಿಳಿಸಿದರು.
ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ವತಿಯಿಂದ 75 ನೇ ಗಣರಾಜ್ಯೋತ್ಸವದ ಅಂಗವಾಗಿ ‘ಪಥ ಸಂಚಲನ ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಅವರ ಮಾತನಾಡುತ್ತಾ,ಪ್ರತಿಯೊಂದು ಮನೆಗಳಿಂದಲೂ ಸಹ ಒಬ್ಬ ಮಗನನ್ನಾದರೂ ದೇಶ ಕಾಯುವ ಯೋಧನನ್ನಾಗಿ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ದೇಶಭಕ್ತಿ , ದೇಶಾಭಿಮಾನ ಹಾಗೂ ದೇಶ ಪ್ರೇಮದ ಬಗ್ಗೆ ಹೆಚ್ಚಿನ ಹರಿವು ಮೂಡಿಸಬೇಕು ಆದರೆ ಶಿಕ್ಷಕರು ಸರಿಯಾಗಿ ಶಾಲೆಗೆ ಹಾಜರಾಗದೆ ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದು ಇಂಥವರ ಮೇಲೆ ನಮ್ಮ ತಾಲೂಕಿನ ಶಿಕ್ಷಣಾಧಿಕಾರಿಗಳು ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಬೇಕು. ಇನ್ನೂ ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದು ಅತಿ ಶೀಘ್ರವಾಗಿ ಶಿಕ್ಷಕರ ಸಮಸ್ಯೆಯನ್ನು ಬಗೆಹರಿಸಲಾಗುವುದು. ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ನಮ್ಮ ಸರ್ಕಾರ ಬಡವರ ಹಾಗೂ ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದು ಇವರ ಶ್ರೇಯೋಭಿವೃದ್ಧಿಗಾಗಿ ಎಲ್ಲ ವಿಧವಾದ ಸೌಲಭ್ಯಗಳನ್ನು ನೀಡಲಾಗುತ್ತದೆ. ನಮ್ಮ ಭಾರತ ದೇಶ ವಿಶ್ವದ ಭೂಪಟದಲ್ಲಿ ತನ್ನದೇ ಆದ ಛಾಪನ್ನು ಮೂಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಸಹ ನಮ್ಮ ಭಾರತೀಯ ಸೇನೆಯನ್ನು ಸೇರುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ವರದರಾಜು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ಜಾನಕೀ ರಾಮ್, ಕ್ಷೇತ್ರ ಶಿಕ್ಷಣಾಧಿಕಾರಿ ಇಂದ್ರಣಮ್ಮ,
ಪುರಸಭಾ ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ ,
ಸದಸ್ಯರಾದ ರವಿ,ರಾಜೇಶ್, ವೇಲುರಾಜು , ಗ್ರಾಮಾಂತರ ವೃತ್ತ ನಿರೀಕ್ಷಕರಾದ ಗಿರೀಶ್,ನಗರ ವೃತ್ತ ನಿರೀಕ್ಷಕರಾದ ಸುರೇಶ್ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು
