ಬ್ಯಾಟರಾಯನಪುರ : ಬ್ಯಾಟರಾಯನಪುರ ಕ್ಷೇತ್ರದ ಗ್ರಾಮಾಂತರ ಮತ್ತು ನಗರ ಮಂಡಲ ಬಿಜೆಪಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕ್ರಮವಾಗಿ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಅಧ್ಯಕ್ಷರಾಗಿ ದೊಡ್ಡಜಾಲದ ಆರ್.ಹನುಮಂತೇಗೌಡ, ನಗರ ಮಂಡಲ ಬಿಜೆಪಿ ಅಧ್ಯಕ್ಷರಾಗಿ ಕೃಷ್ಣಮೂರ್ತಿ ನೇಮಕಗೊಂಡಿದ್ದು,, ಗ್ರಾಮಾಂತರ ಮಂಡಲ ಬಿಜೆಪಿ ನೂತನ ಅಧ್ಯಕ್ಷ ಹನುಮಂತೇಗೌಡರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂಧ್ರ ಶುಕ್ರವಾರ ನೇಮಕಾತಿ ಪತ್ರ ವಿತರಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಬೆಂ.ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಮುಖಂಡರಾದ ಎಚ್.ಸಿ.ತಮ್ಮೇಶ್ ಗೌಡ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

ಉಳಿದಂತೆ ಬ್ಯಾಟರಾಯನಪುರ ಗ್ರಾಮಾಂತರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಹುಣಸಮಾರನಹಳ್ಳಿಯ ಶ್ರೀಕಂಠಮೂರ್ತಿ, ಬೇಗೂರು ಮಹೇಶ್, ನಗರ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ಸೋಮಣ್ಣ, ಹರೀಶ್ ಗೌಡ,‌ ಮಂಜುನಾಥ್ ನೇಮಕಗೊಂಡಿದ್ದಾರೆ.

Leave a Reply

Your email address will not be published. Required fields are marked *