ಸಂಸ್ಥೆಗೆ ಮತ್ತೊಂದು ರಾಷ್ಟ್ರಮಟ್ಟದ ಸ್ಕಾಚ್ ಪ್ರಶಸ್ತಿಯ ಹಿರಿಮೆ.
ಬೆಂ.ಮ.ಸಾ.ಸಂಸ್ಥೆಯು ಸಾರಿಗೆ ಸಂಸ್ಥೆಗಳಲ್ಲಿ ಪ್ರಪ್ರಥಮವಾಗಿ ತನ್ನ ವಾಹನ ಬಲಕ್ಕೆ ಎಲೆಕ್ಟ್ರಿಕ್ ವಾಹನಗಳ ಸೇರ್ಪಡೆಗೊಳಿಸಿದ ಹೆಗ್ಗಳಿಕೆ ನಮ್ಮದು. ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯು ಹಸಿರು ಮನೆ ಅನಿಲಗಳನ್ನು (GHG), ಶಕ್ತಿಯ ವೆಚ್ಚಗಳು, ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುತ್ತದೆ, ಹೊಸ ತಂತ್ರಜ್ಞಾನವನ್ನು ಉತ್ತೇಜಿಸುತ್ತದೆ ಮತ್ತು ಇತರ ಇಂಧನಗಳಿಗಿಂತ ಅಗ್ಗವಾದ ನವೀಕರಿಸಬಹುದಾದ ಸಂಪನ್ಮೂಲಗಳಿಂದ ವಿದ್ಯುತ್ ಉತ್ಪಾದಿಸಬಹುದು ಎಂಬುದು ನಮ್ಮ ಉದ್ದೇಶ.

ದೆಹಲಿ ಮೂಲದ ಸ್ಕ್ವಾಚ್ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು,ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ

ದಿನಾಂಕ:04.03.2024 ರಂದು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬೆಂ.ಮ.ಸಾ.ಸಂಸ್ಥೆಗೆ “ಸ್ಮಾರ್ಟ್ ಸಿಟಿ” (Smart City) ನಾಮನಿರ್ದೇಶನಕ್ಕೆ ಪ್ರತಿಷ್ಟಿತ ರಾಷ್ಟ್ರೀಯ ಸ್ಕಾಚ್ ಸಂಸ್ಥೆಯಿಂದ ಆರ್ಡರ್ ಆಫ್ ಮೇರಿಟ್ ಪ್ರಶಸ್ತಿ ಲಭಿಸಿದೆ. ಸ್ಕಾಚ್ ಸಂಸ್ಥೆಯವರು ಇಂದು ಆಯೋಜಿಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಶ್ರೀ ಸಮೀರ್ ಕೊಚ್ಚರ್ ಅಧ್ಯಕ್ಷರು ,ಸ್ಕಾಚ್ ಗ್ರೂಪ್ ರವರು ಸಂಸ್ಥೆಯು ವಾಯು ಮಾಲಿನ್ಯ ಹೊಗಲಾಡಿಸಲು ತೆಗೆದುಕೊಂಡ ನೂತನ ಕ್ರಮಕ್ಕಾಗಿ ಆರ್ಡರ್ ಆಫ್ ಮರಿಟ್ ಪ್ರಶಸ್ತಿ ಪ್ರದಾನ ಲಭಿಸಿರುವುದಾಗಿ ತಿಳಿಸಿರುತ್ತಾರೆ. ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.