ಯಲಹಂಕ ಕೋಗಿಲು ರಸ್ತೆ ಶ್ರೀನಿವಾಸಪುರ ದಲ್ಲಿರುವ ಆಕ್ಸಫರ್ಡ್ ಶಾಲಾ ವಿದ್ಯಾರ್ಥಿಗಳು 28-02- 2024 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು ಅಂದು ಮಕ್ಕಳಿಗೆ ವೈಜ್ಞಾನಿಕ ವಿಜ್ಞಾನ ಪ್ರಯೋಗ ಕಾರ್ಯಕ್ರಮಗಳನ್ನು ಅಂದು ಆಯೋಜಿಸಲಾಯಿತು. ಮಕ್ಕಳಿಗೆ ವೈಜ್ಞಾನಿಕ ಕುತೂಹಲಕರ ಪ್ರಯೋಗವನ್ನು ಪ್ರೌಢಶಾಲಾ ವಿದ್ಯಾರ್ಥಿಗಳು ಮಾಡಿ ತೋರಿಸಿದರು. ಹಾಗೆಯೇ ವಿಜ್ಞಾನ ಶಿಕ್ಷಕಿಯಾದ ಶ್ರೀಮತಿ ಉಮೇರಾ ಮೇಡಂ ಅವರ ಮಾರ್ಗದರ್ಶನದಲ್ಲಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಮಕ್ಕಳು ಬಹಳ ಉತ್ಸಾಹದಿಂದ ವಿಜ್ಞಾನಕ್ಕೆ ಸಂಬಂಧಿಸಿದ ಜೀವಶಾಸ್ತ್ರ ಚಿತ್ರಗಳಾದ ಹೃದಯ, ಮೂತ್ರನಾಳ ,ಮೆದುಳು ,ಜಠರ ಚಿತ್ರ ಬರೆದರೆ ತಂತ್ರಜ್ಞಾನ ಯಂತ್ರದ ಚಿತ್ರಗಳು ಆಕಷಿ೯ಸಿತು.

ಆಕ್ಸಫರ್ಡ್ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಪ್ರಮೀಳಾ ರಾಜೇಶ್ ಅವರು ವಿಜ್ಞಾನ ಪ್ರತಿಜ್ಞಾ ವಿಧಿಯನ್ನು ಮಕ್ಕಳಿಗೆ ತಿಳಿಹೇಳಿ “ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳಬೇಡಿ ,ವೈಜ್ಞಾನಿಕತೆಯಿಂದ ಮಾತ್ರ ಮೂಢನಂಬಿಕೆ ಬೇರನ್ನು ಕೀಳಲು ಸಾಧ್ಯ” ಎಂದು ಮಕ್ಕಳಿಗೆ ತಿಳಿಹೇಳಿದರು .ಚಿತ್ರಕಲೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

ಇದನ್ನೂ ಓದಿ

ಬೊಂಗೊಧಾರಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಯಲಹಂಕದಲ್ಲಿ ವಿಜೃಂಭಣೆಯ ದುರ್ಗಾ ಪೂಜೆ 2026​ಯಲಹಂಕ ಸುದ್ದಿ:ಬೆಂಗಳೂರಿನ ಯಲಹಂಕದ ವೈಟ್ ಪರ್ಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (ರೇವ ಕಾಲೇಜ್ ಮುಖ್ಯ ರಸ್ತೆ, ಬೆಳ್ಳಿಹಳ್ಳಿ ಕ್ರಾಸ್) ಬೊಂಗೋಧರ ಸಾಂಸ್ಕೃತಿಕ ಸಂಘದ (Bongodhara Cultural Association) ನೇತೃತ್ವದಲ್ಲಿ ದುರ್ಗಾಪೂಜೆ 2026 ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.​ಕಾರ್ಯಕ್ರಮದ ವಿಶೇಷತೆಗಳು:​ಈ ಪೂಜಾ ಮಹೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ.​ಆಗಮಿಸಿದ ಭಕ್ತರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.​ವ್ಯಾಪಾರಸ್ಥರಿಗಾಗಿ ಪ್ರತ್ಯೇಕವಾಗಿ ಸ್ಟಾಲ್ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.​ಪ್ರತಿ ವರ್ಷದಂತೆ ಈ ಬಾರಿಯೂ ಈ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ಸಡಗರದಿಂದ ನಡೆಯುತ್ತಿದೆ.