[20/07, 6:57 pm] R Hanumanthu: ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಾವರ್ಜನಿಕರಲ್ಲಿ ಮನವಿ*ಚಿಕ್ಕಬಳ್ಳಾಪುರ*: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿತಿಂಗಳು ರೂ.2000/-ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ದಿನಾಂಕ:19.07.2023 ರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ 08 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹಫಲಾನುಭವಿಗಳು ಈ ಕೆಳಕಂಡ ವಿವರಗಳಂತೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೋಂದಣಿ ದಿನಾಂಕ:19-07-2023 ರಿಂದ ಆರಂಭಿಸಲಾಗುವುದು. ಈಗಾಗಲೇ ತಿಳಿಸಿರುವಂತೆ ಪಡಿತರಚೀಟಿಯಲ್ಲಿ "ಯಜಮಾನಿ ಮಹಿಳೆ" ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ. ಫಲಾನುಭವಿಯ ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೆಯದಾಗಿ ಈಗಾಗಲೇ ರೇಷನ್ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಮಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತದೆ. ಎರಡನೇಯದಾಗಿ ಪರ್ಯಾಯವಾಗಿ "ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು. ಪ್ರತಿಫಲಾನುಭವಿಯ ನೋಂದಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿ ಕೊಳ್ಳಬಹುದಾಗಿದೆ. ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ರ್ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತು ಪಡಿಸಿ ಪರ್ಯಾಯ ಬ್ಯಾಂಕ್ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ಈ ಎಲ್ಲಾ ಮಾಹಿತಿಯೊಂದಿಗೆ ಕೇಂದ್ರಕ್ಕೆ ಹಾಜರಾಗುವುದು. ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು. ಮೇಲಿನಂತೆ ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿ ಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿ ಕೊಂಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ SMS ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್ / ಬಾಪೂಜಿ ಕೇಂದ್ರ / ಕರ್ನಾಟಕ-ಒನ್ /ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪ್ರಯತ್ನಿಸಿದರೆ. ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ. ಈಗಾಗಲೇ ಆಧಾರ್ ರ್ಜೋಡಣೆಯಾಗಿರು ವಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು. ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಈಯೋಜನೆಯಡಿ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ. ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ / ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ / ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[20/07, 6:57 pm] R Hanumanthu: ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಗೆ 17.85 ಕೋಟಿ ಬಿಡುಗಡೆ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ*ಚಿಕ್ಕಬಳ್ಳಾಪುರ*: ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ವಿತರಿಸಲಾಗುವ 05 ಕೆ.ಜಿ ಆಹಾರ ಧಾನ್ಯದೊಂದಿಗೆ, ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ 05.ಕೆ.ಜಿ ಆಹಾರ ಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ ಆಹಾರ ಧಾನ್ಯವನ್ನು ಉಚಿತವಾಗಿ ವಿತರಿಸಲು ಉದ್ದೇಶಿಸಿದ್ದು, ರಾಜ್ಯದಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು 05 ಕೆ.ಜಿ ಆಹಾರ ಧಾನ್ಯ ಬದಲಾಗಿ ಪ್ರತಿ ಕೆ.ಜಿಗೆ ರೂ.34.00 ರಂತೆ ಪಡಿತರ ಚೀಟಿಯಲ್ಲಿನ ಮುಖ್ಯಸ್ಥರ ಖಾತೆಗೆ ಆಃಖಿ ಮೂಲಕ ಅನ್ನ ಯೋಜನೆಯ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿರುತ್ತದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಕುಟುಂಬಗಳಿಗೆ DBT (ನೇರ ನಗದು ವರ್ಗಾವಣೆ) ಮೂಲಕ ಪಾವತಿಸಲು ಒಟ್ಟು ಮೊತ್ತ ರೂ.17,85,20,000.00 (ರೂ. ಹದಿನೇಳು ಕೋಟಿ ಎಂಬತ್ತೈದು ಲಕ್ಷದ ಇಪ್ಪತ್ತು ಸಾವಿರ ಮಾತ್ರ) ಗಳ ಅನುದಾನ ಬಿಡುಗಡೆ ಮಾಡಿರುತ್ತಾರೆ. ಆದರೆ 36,577 ಫಲಾನುಭವಿ ಕುಟುಂಬಗಳು ಬ್ಯಾಂಕ್ ಖಾತೆ ಹೊಂದಿಲ್ಲದೆ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ, ಬ್ಯಾಂಕಿನಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಇರುವುದರಿಂದ DBT ಮೂಲಕ ಅನ್ನಭಾಗ್ಯ ಯೋಜನೆಯ ಹಣವನ್ನು ವರ್ಗಾಯಿಸಲು ಸಾಧ್ಯವಾಗುತ್ತಿರುವುದಿಲ್ಲ. ಇಂತಹ ಫಲಾನುಭವಿಗಳ ಪಟ್ಟಿಯನ್ನು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರದರ್ಶಿಸಲಾಗಿರುತ್ತದೆ. ಈ ಪಟ್ಟಿಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ವರ್ಗದ ಒಟ್ಟು 36,577 ಕುಟುಂಬಗಳು ಕೂಡಲೇ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಖಚಿತಪಡಿಸಿಕೊಂಡು, DBT ಮೂಲಕ ಅನ್ನಭಾಗ್ಯ ಯೋಜನೆಯ ಹಣವನ್ನು ವರ್ಗಾಯಿಸಲು ಅನುವಾಗುವಂತೆ ಬ್ಯಾಂಕ್ ಖಾತೆ ಹೊಂದಿಲ್ಲದೆ ಇರುವವರು ದಿನಾಂಕ:20/07/2023 ರೊಳಗೆ ಪಡಿತರ ಚೀಟಿಯಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಬೇಕು, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವವರು ಆಧಾರ್ ಲಿಂಕ್ ಮಾಡಿಸಿಕೊಳ್ಳಬೇಕು ಮತ್ತು ಬ್ಯಾಂಕಿನಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸದೇ ಇರುವವರು ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

[20/07, 6:57 pm] R Hanumanthu: ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಾವರ್ಜನಿಕರಲ್ಲಿ ಮನವಿ*ಚಿಕ್ಕಬಳ್ಳಾಪುರ*: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬ ಯಜಮಾನಿಯ ಪಾತ್ರ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿತಿಂಗಳು ರೂ.2000/-ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ದಿನಾಂಕ:19.07.2023 ರಿಂದ ಚಿಕ್ಕಬಳ್ಳಾಪುರ ಜಿಲ್ಲೆಯ 08 ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹಫಲಾನುಭವಿಗಳು ಈ ಕೆಳಕಂಡ ವಿವರಗಳಂತೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಯ ನೋಂದಣಿ ದಿನಾಂಕ:19-07-2023 ರಿಂದ ಆರಂಭಿಸಲಾಗುವುದು. ಈಗಾಗಲೇ ತಿಳಿಸಿರುವಂತೆ ಪಡಿತರಚೀಟಿಯಲ್ಲಿ "ಯಜಮಾನಿ ಮಹಿಳೆ" ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರತಕ್ಕದ್ದಲ್ಲ. ಫಲಾನುಭವಿಯ ನೋಂದಣಿಯನ್ನು 2 ವಿಧಾನದಿಂದ ಮಾಡಿಸಬಹುದಾಗಿದೆ. ಮೊದಲನೆಯದಾಗಿ ಈಗಾಗಲೇ ರೇಷನ್ಕಾರ್ಡಿನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು. ಗ್ರಾಮಾಂತರ ಪ್ರದೇಶದಲ್ಲಿ ಅವರು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರವಾಗಿರುತ್ತದೆ. ಹಾಗೆಯೇ ನಗರ ಪ್ರದೇಶದಲ್ಲಿ ಅವರ ಸಮೀಪವಿರುವ ಕರ್ನಾಟಕ-ಒನ್ ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಮಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳು ಕೇಂದ್ರವಾಗಿರುತ್ತದೆ. ಎರಡನೇಯದಾಗಿ ಪರ್ಯಾಯವಾಗಿ "ಪ್ರಜಾಪ್ರತಿನಿಧಿ” (ಸರ್ಕಾರದಿಂದ ಗುರುತಿಸಲ್ಪಟ್ಟ ಸ್ವಯಂಸೇವಕರು) ತಮ್ಮ ಮನೆಗೆ ಭೇಟಿ ನೀಡಿದಾಗ ಅವರಿಂದಲೂ ಸಹ ನೊಂದಾಯಿಸಿಕೊಳ್ಳಬಹುದು. ಪ್ರತಿಫಲಾನುಭವಿಯ ನೋಂದಣಿಗೆ ನಿಗದಿಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರ್ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ. ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ- ಒನ್/ ಬಾಪೂಜಿಕೇಂದ್ರ/ ಕರ್ನಾಟಕ-ಒನ್/ ಬೆಂಗಳೂರು-ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೇ ಇದ್ದಲ್ಲಿ, ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯೊಳಗೆ ಭೇಟಿ ನೀಡಿ ನೋಂದಾಯಿಸಿ ಕೊಳ್ಳಬಹುದಾಗಿದೆ. ಯೋಜನೆಯಡಿ ನೊಂದಾಯಿಸಿಕೊಳ್ಳಲು ಪಡಿತರಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ, ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ (ಆಧಾರ್ ನಂಬರ್ ರ್ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತು ಪಡಿಸಿ ಪರ್ಯಾಯ ಬ್ಯಾಂಕ್ಖಾತೆಗೆ ಹಣ ವರ್ಗಾವಣೆ ಬಯಸಿದಲ್ಲಿ ಸದರಿ ಬ್ಯಾಂಕ್ ಖಾತೆಯ ಪಾಸ್ ಬುಕ್) ಮಾಹಿತಿ ಅಗತ್ಯವಿರುತ್ತದೆ. ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ಈ ಎಲ್ಲಾ ಮಾಹಿತಿಯೊಂದಿಗೆ ಕೇಂದ್ರಕ್ಕೆ ಹಾಜರಾಗುವುದು. ಗ್ರಾಮ್-ಒನ್ / ಬಾಪೂಜಿಕೇಂದ್ರ / ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಾಗ ಮಂಜೂರಾತಿ ಪತ್ರವನ್ನು ಕೂಡ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ನೊಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರವನ್ನು ತದನಂತರ ತಮ್ಮ ಮನೆಗೆ ತಲುಪಿಸಲಾಗುವುದು. ಮೇಲಿನಂತೆ ಪ್ರಜಾಪ್ರತಿನಿಧಿ ಮೂಲಕ ಅಥವಾ ಗ್ರಾಮ್-ಒನ್/ ಬಾಪೂಜಿ ಕೇಂದ್ರ/ ಕರ್ನಾಟಕ-ಒನ್ / ಬೆಂಗಳೂರು ಒನ್ ಕೇಂದ್ರಗಳಲ್ಲಿ ನೊಂದಾಯಿಸಿ ಕೊಂಡಲ್ಲಿ, ಅರ್ಜಿದಾರರು ನೀಡಿದ ಮೊಬೈಲ್ ಸಂಖ್ಯೆಗೆ SMS ಮೂಲಕ ಮಂಜೂರಾತಿ ಬಗ್ಗೆ ಸಂದೇಶ ರವಾನಿಸಲಾಗುವುದು. ಒಂದು ವೇಳೆ ಫಲಾನುಭವಿಯು ಗ್ರಾಮ್-ಒನ್ / ಬಾಪೂಜಿ ಕೇಂದ್ರ / ಕರ್ನಾಟಕ-ಒನ್ /ಬೆಂಗಳೂರು-ಒನ್ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡಿದಲ್ಲಿ, ಆನಂತರ ಪ್ರಜಾಪ್ರತಿನಿಧಿ ಅವರ ಮನೆಗೆ ಭೇಟಿ ನೀಡಿ ನೊಂದಾಯಿಸಲು ಪ್ರಯತ್ನಿಸಿದರೆ. ಈಗಾಗಲೇ ನೊಂದಾಯಿಸಿರುವ ಮಾಹಿತಿ ವ್ಯಕ್ತವಾಗುತ್ತದೆ. ಈಗಾಗಲೇ ಆಧಾರ್ ರ್ಜೋಡಣೆಯಾಗಿರು ವಫಲಾನುಭವಿಯ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಡಿ.ಬಿ.ಟಿ. ಮೂಲಕ ಜಮೆ ಮಾಡಲಾಗುವುದು. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಪರ್ಯಾಯ ಬ್ಯಾಂಕ್ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್ ಖಾತೆಗೆ ಮಾಹೆಯಾನ ರೂ.2000/-ಗಳನ್ನು ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುವುದು. ಈ ಯೋಜನೆಯಡಿ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ. ಈಯೋಜನೆಯಡಿ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ಉಚಿತವಾಗಿರುತ್ತದೆ. ಈ ಯೋಜನೆಯಡಿ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿರುವುದಿಲ್ಲ. ಆದ್ದರಿಂದ ಒಂದು ವೇಳೆ ನಿಗದಿತ ದಿನಾಂಕ / ಸಮಯಕ್ಕೆ ನೊಂದಾಯಿಸಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ ಮುಂದೆ ಯಾವುದೇ ದಿನಾಂಕ / ಸಮಯದಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *