




ಯಲಹಂಕ : ಯಲಹಂಕ ಕ್ಷೇತ್ರದ ರಾಜಾನುಕುಂಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಸಾದೇನಹಳ್ಳಿ ಗ್ರಾಮದ ಚನ್ನಮ್ಮ ಪಟಾಲಪ್ಪ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷರ ಸ್ಥಾನಕ್ಕಾಗಿ ಬುಧವಾರ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಚನ್ನಮ್ಮ ಪಟಾಲಪ್ಪ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಹೇಮಲತಾ ನಾಮಪತ್ರ ಸಲ್ಲಿಸಿದ್ದರು.
ಒಟ್ಟು 27 ಸದಸ್ಯ ಬಲ ಹೊಂದಿರುವ ರಾಜಾನು ಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಚನ್ನಮ್ಮ ಪಟಾಲಪ್ಪ 16 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹೇಮಲತಾ 11 ಮತಗಳನ್ನು ಪಡೆದು ಪರಾಭವಗೊಂಡರು.
ನೂತನ ಅಧ್ಯಕ್ಷೆ ಚನ್ನಮ್ಮ ಪಟಾಲಪ್ಪರವರನ್ನು ಗ್ರಾ.ಪಂ. ಸದಸ್ಯರು, ಬಿಜೆಪಿ ಮುಖಂಡರು ಗೌರವ ಸನ್ಮಾನ ನೀಡಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಗ್ರಾ.ಪಂ. ಅಧ್ಯಕ್ಷರಾದ ಎಸ್. ಜಿ. ನರಸಿಂಹ ಮೂರ್ತಿ(ಎಸ್.ಟಿ.ಡಿ. ಮೂರ್ತಿ), ಅಂಬಿಕಾ ರಾಜೇಂದ್ರ ಕುಮಾರ್, ಆರ್ ಎಸ್ ಎಸ್ ಎನ್ ಬ್ಯಾಂಕ್ ನಿರ್ದೇಶಕ ಅದ್ದೆ ವಿಶ್ವನಾಥಪುರ ಎಂ. ಮಂಜುನಾಥ್, ಬಿಜೆಪಿ ಮುಖಂಡರಾದ ಚೊಕ್ಕನಹಳ್ಳಿ ವೆಂಕಟೇಶ್, ಯುವ ಮುಖಂಡ ಸಾದೇನಹಳ್ಳಿ ಪ್ರಕಾಶ್ ಗೌಡ, ಸಿಂಗನಾಯಕನಹಳ್ಳಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಎಸ್. ಜಿ. ಪ್ರಶಾಂತ್ ರೆಡ್ಡಿ , ಸದಸ್ಯ ಕೆ. ಬಾಬು ಸೇರಿದಂತೆ ರಾಜಾನುಕುಂಟೆ ಗ್ರಾ. ಪಂ. ಸದಸ್ಯರಿದ್ದರು.