









ಬ್ಯಾಟರಾಯನಪುರ : 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಗ್ರಾ.ಪಂ. ವತಿಯಿಂದ ಏರ್ಪಡಿಸಿದ್ದ ಕಾರ್ಯ ಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು.
ಇದೇ ವೇಳೆ ಬೆಟ್ಟಹಲಸೂರು ಮತ್ತು ಹುಣಸಮಾರನಹಳ್ಳಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಹರ್ ಘರ್ ತಿರಂಗ ಕಾರ್ಯಕ್ರಮದ ಪ್ರಚಾರ ಕಾರ್ಯ ನಡೆಸಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಚ್.ಸಿ.ತಮ್ಮೇಶ್ ಗೌಡ, ಬೆಟ್ಟಹಲಸೂರು ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ನಾಗರಾಜ್ ಬಾಬು, ನಿಕಟಪೂರ್ವ ಅಧ್ಯಕ್ಷ ಬಿ.ಎಸ್.ಅನಿಲ್ ಕುಮಾರ್, ತಾ.ಪಂ.ಮಾಜಿ ಸದಸ್ಯ ನಾಗರಾಜ್ ಬಾಬು, ಗ್ರಾಪಂ.ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್, ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಉಪಾಧ್ಯಕ್ಷೆ ವಿಮಲಾ ಗಣೇಶ್, ಬ್ಯಾಟರಾಯನಪುರ ಗ್ರಾ.ಮಂಡಲ ಬಿಜೆಪಿ ಅಧ್ಯಕ್ಷ ದೊಡ್ಡಜಾಲ ಹನುಮಂತುಗೌಡ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಂಠ ಮೂರ್ತಿ, ಬೇಗೂರು ಮಹೇಶ್, ರವಿ, ಗ್ರಾ.ಪಂ. ಸದಸ್ಯರಾದ ಬಿ.ಆರ್.ರಾಮಾಂಜಿನಿ, ಮಮತಾ ಪ್ರಶಾಂತ್, ಬಿ.ವೈ.ಮಂಜುನಾಥ್, ರತ್ನಮ್ಮ ಆಂಜಿನಪ್ಪ, ತುಳಸಮ್ಮ ವೆಂಕಟರಮಣಪ್ಪ, ಸಾವಿತ್ರಮ್ಮ ಮುನಿರಾಜು, ಸುವರ್ಣ ಜಯಣ್ಣ, ಹಸಿರೇ ಉಸಿರು ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಬಿ.ಎಂ. ಶ್ರೀನಿವಾಸಮೂರ್ತಿ, ಬಿಜೆಪಿ ಮುಖಂಡರಾದ ಸುಗ್ಗಟ್ಟ ಸುರೇಶ್, ಸೇರಿದಂತೆ ಇನ್ನಿತರರಿದ್ದರು.
ಸುದ್ದಿ ಹಾಗೂ ಜಾಹಿರಾತು ಗಾಗಿ ಸಂಪರ್ಕಿಸಿ
ಆರ್ ಹನುಮಂತ
98450 85 793
90 352 822 96
73 49 3 3 79 89
