
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳನ್ನು ಒಳಗೊಂಡಂತೆ ಎಲ್ಲಾ ವರ್ಗಗಳ ಜನತೆಯ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಸಿದ್ದರಾಮಯ್ಯರವರ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬಾರದು ಅವರ ಬೆಂಬಲಕ್ಕೆ ನಾವೆಲ್ಲ ಇದ್ದೇವೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ಎಸ್.ರಫಿ ಉಲ್ಲಾ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹೆಚ್.ಡಿ.ಕುಮಾರಸ್ವಾಮಿ ಮತ್ತು ಮುರುಗೇಶ್ ನಿರಾಣಿಯವರ ವಿರುದ್ಧ ಆರೋಪಗಳು ಬಂದಾಗ ರಾಜ್ಯಪಾಲರು ಅವರ ವಿರುದ್ಧ ಏಕೆ ಪ್ರಾಷಿಕ್ಯೂಷನ್ ಗೆ ಆದೇಶ ನೀಡಿರಲಿಲ್ಲ. ಕಾಂಗ್ರೆಸ್ ಪಕ್ಷ ರಾಜ್ಯಪಾಲರ ನಿರ್ಧಾರವನ್ನು ತೀವ್ರವಾಗಿ ಪ್ರತಿಭಟಿಸುತ್ತಿದೆ.
ಸಾಂಕೇತಿಕವಾಗಿ ನಾಳೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿಯೂ ಸಹ ಪ್ರತಿಭಟನೆ ಏರ್ಪಡಿಸಲಾಗಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯರವರ ಜೊತೆಗಿದೆ ಎಂದು ಹೇಳಿದರು.
ಸುದ್ದಿ ಹಾಗೂ ಜಾಹಿರಾತುಗಾಗಿ ಸಂಪರ್ಕಿಸಿ
ಆರ್ ಹನುಮಂತು
9845085793
9035282296
7349337989
