ಬ್ಯಾಟರಾಯನಪುರ : ಎಸ್ ಎಸ್ ಎಲ್ ಸಿ‌ ಮತ್ತು ಪಿಯುಸಿ ಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಹಸಿರು ಮತ್ತು ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ ಬಕೆಟ್ ಗಳ ವಿತರಣೆ ಸೇರಿದಂತೆ ಸರ್ಕಾರದ ವಿವಿಧ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವ ಮೂಲಕ ಬ್ಯಾಟರಾಯನಪುರ ಕ್ಷೇತ್ರದ ಸಾತನೂರು ಗ್ರಾ.ಪಂ. ವ್ಯಾಪ್ತಿಯ ಹೊಸಹಳ್ಳಿಯಲ್ಲಿ ಏರ್ಪಡಿಸಿದ್ದ 2024-25 ನೇ ಸಾಲಿನ ಮೊದಲನೇ ಸುತ್ತಿನ ಗ್ರಾಮಸಭೆ ಯಶಸ್ವಿಯಾಗಿ ನೆರವೇರಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಣ್ಣ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದು ಕೊಂಡು ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ. ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಗರಿಷ್ಠ ತೆರಿಗೆ ಸಂಗ್ರಹಣೆಯ ಗುರಿ ಹೊಂದಿದ್ದೇವೆ. ಈ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾತ್ತಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ಉಲ್ಬಣಿಸದಂತೆ ಕ್ರಮ ವಹಿಸಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ಲಭ್ಯವಿರುವ ಅನುಧಾನದಲ್ಲಿ ತಾರತಮ್ಯಕ್ಕೆ ಅವಕಾಶವಿಲ್ಲದ ರೀತಿಯಲ್ಲಿ ಎಲ್ಲಾ ಗ್ರಾಮಗಳಲ್ಲಿ ಸಮಾನ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದರು.

ಗ್ರಾಮ ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಜಾಹೆರ ತಸ್ನೀಮ್, ಗ್ರಾ.ಪಂ.ಸದಸ್ಯರಾದ ಎನ್. ನಾರಾಯಣಸ್ವಾಮಿ, ಎಂ.ಮಾಲಾ ಸುಬ್ರಮಣಿ, ಎ.ಕೆ.ಜಿಲಾನಿ, ಮುನಿತಿಮ್ಮರಾಯಪ್ಪ. ಮಾನಸ ಬಿ.ಆರ್., ಸುಶ್ಮಿತಾ ಎನ್., ಕೃಷ್ಣಪ್ಪ ಎಂ., ಸುಜಾತ ಎಸ್.ಎಲ್., ಅಶ್ವಿನಿ ಕೆ.ಎನ್., ಪಿಡಿಓ ಬಿ.ಮಮತಾ, ಕಾರ್ಯದರ್ಶಿ ಎಂ.ಸಿ.ಶಿವಪ್ರಸಾದ್ ಸೇರಿದಂತೆ ಗ್ರಾ.ಪಂ. ಸಿಬ್ಬಂದಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಸಹಾಯ ಸಂಘಗಳ ಪ್ರತಿನಿಧಿಗಳಿದ್ದರು.

ಸುದ್ದಿ ಹಾಗೂ ಜಾಹೀರಾತುಗಾಗಿ ಸಂಪರ್ಕಿಸಿ

ಆರ್ ಹನುಮಂತು

9845085793

,7349337989

Leave a Reply

Your email address will not be published. Required fields are marked *